Advertisement

ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಗಣೇಶನ ದರ್ಶನ

07:51 PM Sep 07, 2021 | Team Udayavani |

ಕುಷ್ಟಗಿ(ಕೊಪ್ಪಳ):ಸಾರ್ವಜನಿಕ ಗಣೇಶೋತ್ಸವದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸದರಿ ವಾರ್ಡ್‌ನ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ತಹಶೀಲ್ದಾರ್ ಎಂ.ಸಿದ್ದೇಶ ಹೇಳಿದರು.

Advertisement

ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳ ಆದೇಶದನ್ವಯ ಕೋವಿಡ್-19 ಮಾರ್ಗಸೂಚಿಯನ್ವಯ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಸರ್ಕಾರದ ಈ ನಿಯಮ ಪಾಲಿಸತಕ್ಕದ್ದು. ಪ್ರತಿ ವಾರ್ಡ್ಗೆ ಒಂದರಂತೆ ಮೂರ್ತಿ ಪ್ರತಿಷ್ಠಾಪಿಸಲು ಸೂಚಿಸಲಾಗಿದೆ. ಪ್ರತಿ ವಾರ್ಡ ಹಾಗೂ ಊರಿನಲ್ಲಿ ಸ್ಥಳೀಯ ಆಡಳಿತ ಹಾಗೂ ಪೊಲೀಸರ ಗಮನಕ್ಕೆ ತಂದು ಪ್ರತಿಷ್ಠಾಪಿಸಬೇಕು.

ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ರಿಕ್ಷಾ : ಓರ್ವ ಮಹಿಳೆ ಸಾವು, ಐವರು ಗಂಭೀರ

ಸದರಿ ವಾರ್ಡ್ನ ನಾಗರೀಕರು ಶೇ.100 ರಷ್ಟು ಲಸಿಕೆ ಹಾಕಿಸಿಕೊಂಡಿದ್ದರೆ ಮಾತ್ರ, ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗುವುದು. ಎಲ್ಲರೂ ಲಸಿಕೆ ಹಾಕಿಸಿಕೊಂಡಿರುವುದು ಖಚಿತ ಪಡಿಸಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಈ ಸೂಚನೆ ನೀಡಲಾಗಿದ್ದು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳಿಗೆ ಪಂಚಾಯತಿಯವರಿಗೆ ಮಾಹಿತಿ ನೀಡಲಾಗಿದೆ. ಪ್ರತಿ ಕೇಂದ್ರದಲ್ಲಿ ಲಸಿಕೆಯ ವ್ಯವಸ್ಥೆ ಮಾಡಲಾಗಿದ್ದು, ಲಸಿಕೆ ಹಾಕಲು ಆರೋಗ್ಯ ಇಲಾಖೆ ಸನ್ನದ್ದವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next