Advertisement

ಕೊರೊನಾ-ಒಮಿಕ್ರಾನ್‌ ತಡೆಗೆ ಮಾರ್ಗಸೂಚಿ ಪಾಲನೆ ಕಡ್ಡಾಯ: ಬೀಳಗಿ

05:55 PM Dec 23, 2021 | Team Udayavani |

ದಾವಣಗೆರೆ: ರಾಜ್ಯದಲ್ಲಿ ಕೋವಿಡ್‌ 19 ಹಾಗೂಓಮಿಕ್ರಾನ್‌ ವೈರಾಣು ಸೋಂಕು ಹರಡುವಿಕೆನಿಯಂತ್ರಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ. ಕ್ರಿಸ್‌ಮಸ್‌ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿ ಸಿದಂತೆಮಾರ್ಗಸೂಚಿಗಳನ್ನು ಹೊರಡಿಸಿದೆ. ಜಿಲ್ಲೆಯಾದ್ಯಂತಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕುಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ.

Advertisement

ಕೊರೊನಾ ಸೋಂಕು ಹರಡುವುದನ್ನುನಿಯಂತ್ರಿಸಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆಕಂಡುಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್‌ಮಸ್‌ ಹಾಗೂಹೊಸವರ್ಷವನ್ನು ಸರಳವಾಗಿ ಆಚರಿಸುವ ಅವಶ್ಯಕತೆಇದೆ. ಈ ಸಂದರ್ಭದಲ್ಲಿ ಜಿಲ್ಲೆಯಾದ್ಯಂತಸಾಮೂಹಿಕ ಕೂಟ, ಸಾರ್ವಜನಿಕ ಸ್ಥಳಗಳಲ್ಲಿಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿಸಮುಚ್ಚಯಗಳಲ್ಲಿ ಮತ್ತು ಪಬ್‌, ಬಾರ್‌,ರೆಸ್ಟೋರೆಂಟ್‌, ರೆಸಾರ್ಟ, ಕ್ಲಬ್‌ ಹಾಗೂ ಜನಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಹ ಸ್ಥಳಗಳಲ್ಲಿಆಯೋಜಿಸುವುದನ್ನು ನಿಷೇಧಿ ಸಲಾಗಿದೆ ಎಂದುತಿಳಿಸಿದ್ದಾರೆ.

ಕ್ರಿಸ್‌ಮಸ್‌ ಆಚರಣೆ ಸಂದರ್ಭದಲ್ಲಿ ಚರ್ಚ್‌ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿಪ್ರಾರ್ಥನೆಗಳು ಇತ್ಯಾದಿಗಳನ್ನು ಕೋವಿಡ್‌ ನಿಯಮಪಾಲಿಸಿ ಮಾಡಬೇಕು. ಯಾವುದೇ ಆಚರಣೆ ಅಥವಾಪ್ರಾರ್ಥನೆಗಳನ್ನು ನಡೆಸಲು ಸಾರ್ವಜನಿಕ ಸ್ಥಳಗಳು,ರಸ್ತೆಗಳು, ಉದ್ಯಾನವನಗಳನ್ನು ಬಳಸುವಂತಿಲ್ಲ ಎಂದುತಿಳಿಸಿದ್ದಾರೆ.ಹೊಸ ವರ್ಷಾಚರಣೆ ಮಾರ್ಗಸೂಚಿ ಡಿ.30 ರಿಂದ ಜ. 2 ರ ವರೆಗೆ ಜಾರಿಯಲ್ಲಿರುತ್ತದೆ.ಕ್ಲಬ್‌, ಪಬ್‌ಗಳು, ರೆಸ್ಟೋರೆಂಟ್‌, ಹೋಟೆಲ್‌,ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ, ಮುಂತಾದಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲುಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಹೊಸ ವರ್ಷ ಆಚರಿಸಲು ಸಾರ್ವಜನಿಕ ಸ್ಥಳಗಳುಸೇರಿದಂತೆ ರಸ್ತೆ, ಉದ್ಯಾನವನ, ಆಟದ ಮೈದಾನಗಳುಇತ್ಯಾದಿಗಳನ್ನು ಬಳಸಬಾರದು. ರೆಸ್ಟೋರೆಂಟ್‌,ಹೋಟೆಲ್‌, ಕ್ಲಬ್‌, ಪಬ್‌ಗಳು ಎಂದಿನಂತೆ ಕೊರೊನಾಸಮುಚಿತ ವರ್ತನೆಯೊಂದಿಗೆ ಸಿಬ್ಬಂದಿಗಳು ಆರ್‌ಟಿಪಿಸಿಆರ್‌ ನೆಗೆಟಿವ್‌ ಮತ್ತು 2 ಡೋಸ್‌ ಕೋವಿಡ್‌ಲಸಿಕೆಯನ್ನು ಕಡ್ಡಾಯವಾಗಿ ಪಡೆಯುವ ಮೂಲಕಕಾರ್ಯನಿರ್ವಹಿಸಬಹುದು ಎಂದು ತಿಳಿಸಿದ್ದಾರೆ.ರೆಸ್ಟೋರೆಂಟ್‌, ಹೋಟೆಲ್‌, ಕ್ಲಬ್‌, ಪಬ್‌ಗಳಿಗೆ ಭೇಟಿನೀಡುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್‌ಕೋವಿಡ್‌ ಲಸಿಕೆ ಪಡೆದಿರುವುದನ್ನು ಪ್ರದರ್ಶಿಸಿದನಂತರವೇ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು.

ಅಪಾರ್ಟ್‌ಮೆಂಟ್‌ ಅಸೋಷಿಯೇಶನ್‌ಗೆಸಂಬಂಧಪಟ್ಟಂತೆ ಸಾಮಾಜಿಕ ಅಂತರ ಹಾಗೂಕೋವಿಡ್‌ ಸಮುಚಿತ ವರ್ತನೆಯೊಂದಿಗೆ ತಮ್ಮಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿಸಲಾಗಿದೆ.ಆದರೆ, ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್‌ ಫ್ಲೋರ್‌ನಂತಹಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನುಖಚಿತಪಡಿಸಿಕೊಳ್ಳಲು ಸಂಘಟಕರು ಜವಾಬ್ದಾರರಾಗಿರುತ್ತಾರೆ ಎಂದು ಎಚ್ಚರಿಸಿದ್ದಾರೆ.

Advertisement

ಸರ್ಕಾರ ಕಳೆದ ಡಿ.3 ರಂದು ಹೊರಡಿಸಿರುವ ಮಾರ್ಗಸೂಚಿಗಳನ್ನುಕೂಡ ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರಕಾಯ್ದುಕೊಳ್ಳುವುದು ಮತ್ತು ಹೋಟೆಲ್‌ಗ‌ಳು, ಮಾಲ್‌ಗಳು, ಪಬ್‌, ರೆಸ್ಟೋರೆಂಟ್‌ಗಳು ಪ್ರದೇಶಗಳಲ್ಲಿಥರ್ಮಲ್‌ ಸ್ಕ್ರೀನಿಂಗ್‌ ಹಾಗೂ ಸ್ಯಾನಿಟೈಸರ್‌ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕುಎಂದು ತಿಳಿಸಿದ್ದಾರೆ. ಸರ್ಕಾರದ ಮಾರ್ಗಸೂಚಿ,ನಿಬಂಧನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತುನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕಕಾಯ್ದೆ ಅನುಸಾರ ಕ್ರಮ ಜರುಗಿಸಲಾಗುವುದು ಎಂದುತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next