Advertisement

ಕುಟುಂಬಸ್ಥರು ಮುಂದೆ ಬಾರದಿದ್ದಲ್ಲಿ ಜಿಲ್ಲಾಡಳಿತದಿಂದಲೇ ಮೃತ ಸೋಂಕಿತರ ಅಂತಿಮ ಸಂಸ್ಕಾರ

09:01 PM Jun 03, 2021 | Team Udayavani |

ಬೆಂಗಳೂರು: ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರ ಮಾಡಲು ಕೆಲ ಕುಟುಂಬಸ್ಥರು ಮುಂದೆ ಬರದಿರುವ ಹಿನ್ನೆಲೆಯಲ್ಲಿ ಅಂತಹ ವ್ಯಕ್ತಿಗಳ ಮೃತದೇಹವನ್ನು ಆಯಾ ಧರ್ಮದ ವಿಧಿವಿಧಾನದಂತೆ ಗೌರವಯುತವಾಗಿ ಅಂತ್ಯ ಸಂಸ್ಕಾರ ನಡೆಸಿ ಅಂತಿಮ ವಿಧಿವಿಧಾನಗಳನ್ನು ಆಯಾಯ ತಹಶೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ನೆರವೇರಿಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

Advertisement

ಈಗಾಗಲೇ ಕಂದಾಯ ಸಚಿವ ಆರ್ ಅಶೋಕ್ ಅವರು ಖುದ್ದು ನೇತೃತ್ವವಹಿಸಿ ಸುಮಾರು ಐದು ನೂರಕ್ಕೂ ಹೆಚ್ಚು ಅಸ್ಥಿಗಳನ್ನು ಕಾವೇರಿ ನದಿ ತೀರದಲ್ಲಿ ವಿಸರ್ಜನೆ ಮಾಡಿದ್ದರು. ಈ ವೇಳೆಯೇ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ಮುಂದಾಗದ ವೇಳೆ ಖುದ್ದು ಕಂದಾಯ ಇಲಾಖೆಯ ವತಿಯಿಂದಲೇ ಅಂತಿಮ ವಿಧಿ ವಿಧಾನಗಳನ್ನು  ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಇದನ್ನೂ ಓದಿ:ಶಿಲ್ಪನಾಗ್ ರಾಜೀನಾಮೆಯ ಹಿಂದಿನ ಕಾರಣವನ್ನು ತಿಳಿಯುವ ಪ್ರಯತ್ನ ಮಾಡುತ್ತೇನೆ:ಎಸ್.ಟಿ.ಸೋಮಶೇಖರ್

ಅದರಂತೆ ಈಗ ಇಲಾಖೆಯ ವತಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಅದರಂತೆ ಆಯಾ ಜಿಲ್ಲೆಗಳಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ಹಾಗೂ ಅಂತಿಮ ವಿಧಿ ವಿಧಾನಗಳಿಗೆ ಜಿಲ್ಲಾಡಳಿತವೇ ಮುಂದಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next