Advertisement

ಕೋವಿಡ್‌: ಹೆಚ್ಚುವರಿ 25 ತಂಡ ರಚನೆಗೆ ಸೂಚನೆ

01:39 PM Sep 30, 2020 | Suhan S |

ಮೈಸೂರು: ಜಿಲ್ಲಾಧಿಕಾರಿಯಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡ ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಕೋವಿಡ್‌ ಸ್ಥಿತಿಗತಿ ಹಾಗೂ ದಸರಾ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.

Advertisement

ಕೋವಿಡ್‌ ಪರೀಕ್ಷೆಗೆ ಈಗಾಗಲೇ ಜಿಲ್ಲೆಯಲ್ಲಿ 70 ಸ್ಥಾಯಿ ತಂಡಗಳು ಹಾಗೂ 30 ಸಂಚಾರಿ ತಂಡಗಳು ಕೆಲಸ ಮಾಡುತ್ತಿವೆ. ಇನ್ನೂ ಹೆಚ್ಚಿನ ತಂಡಗಳ ನಿಯೋಜನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅನುಮತಿ ಕೋರಿದರು. ಈ ಹಿನ್ನೆಲೆಯಲ್ಲಿ ಈಗಿರುವ 30 ಸಂಚಾರಿ ತಂಡಗಳ ಜೊತೆಗೆ ಇನ್ನೂ 25 ತಂಡಗಳಿಗೆ ಬೇಕಾದ ಲ್ಯಾಬ್‌ ಟೆಕ್ನಿಷಿಯನ್‌ ಹಾಗೂ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನಿಯೋಜಿಸಿಕೊಳ್ಳಲು ನೂತನ ಜಿಲ್ಲಾಧಿಕಾರಿಗಳು ಅನುಮತಿ ನೀಡಿದರು.

ಕೋವಿಡ್‌-19 ಮಾದರಿ ಸಂಗ್ರಹಕ್ಕೆ ಬೇಕಾದ ವಿಟಿಎಂ ಉಪಕರಣಗಳು ಆರೋಗ್ಯ ಇಲಾಖೆಯಿಂದ ಬರುವುದು ತಡವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅನುದಾನದಲ್ಲೇ 20 ಸಾವಿರ ವಿಟಿಎಂ ಉಪಕರಣಗಳನ್ನು ಖರೀದಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ತಿಳಿಸಿದರು.

ಕೋವಿಡ್‌ ನಿಂದಾಗುವ ಸಾವಿನ ಪ್ರಮಾಣ ಕಡಿಮೆ ಮಾಡಲು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋವಿಡ್‌ ನಿಯಂತ್ರಣಕ್ಕಾಗಿ ನಿಯೋಜಿಸಿರುವ ಎಲ್ಲಾ ನೋಡಲ್‌ ಅಧಿಕಾರಿಗಳ ಸಭೆಯನ್ನೂ ಆದಷ್ಟು ಬೇಗಕರೆಯುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಗುರುದತ್‌ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್‌. ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟೇಶ್‌, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಶಿವಪ್ರಸಾದ್‌, ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವಿ ಮತ್ತಿತರರು ಉಪಸ್ಥಿತರಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next