Advertisement

ಕೋವಿಡ್ ಸೋಂಕಿತರ ಸಂಖ್ಯೆ 1738ಕ್ಕೆ ಏರಿಕೆ

08:42 AM Jul 28, 2020 | Suhan S |

ಹಾಸನ: ಜಿಲ್ಲೆಯಲ್ಲಿ ಸೋಮವಾರ 65 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1738 ಕ್ಕೇರಿದ್ದು, ಸಾವಿನ ಸಂಖ್ಯೆ 45ಕ್ಕೆ ಏರಿದೆ.

Advertisement

ಕೋವಿಡ್ ಸೋಂಕಿತ 72 ವರ್ಷದ ವೃದ್ಧ ಪುರುಷ ಸೋಮವಾರ ಮೃತಪಟ್ಟಿದ್ದು, ಅವರು ಜು.13 ರಂದು ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೂತ್ರಪಿಂಡ ಸಮಸ್ಯೆ, ಮಧುಮೇಹ, ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫ‌ಲಕಾರಿಯಾಗದೆ ಮೃಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಎಂ.ಸತೀಶ್‌ಕುಮಾರ್‌ ತಿಳಿಸಿದ್ದಾರೆ.

ಸೋಮವಾರ ಸೋಂಕು ದೃಢಪಟ್ಟಿರುವ 65 ಮಂದಿಯ ಪೈಕಿ ಹಾಸನ ತಾಲೂಕಿಗೆ ಸೇರಿದ 27 ಮಂದಿ, ಚನ್ನರಾಯಪಟ್ಟಣ ತಾಲೂಕಿನ 13, ಹೊಳೆನರಸೀಪುರ ತಾಲೂಕಿನ 9 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅರಸೀಕೆರೆ ತಾಲೂಕಿನ 5 ಮಂದಿ, ಅರಕಲಗೂಡು ತಾಲೂಕಿನ 4, ಆಲೂರು ಮತ್ತು ಸಕಲೇಶಪುರ ತಾಲೂಕಿನ ತಲಾ ಮೂವರಿಗೆ ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ದೃಢ ಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 65 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ 847 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ 19 ಮಂದಿ ಸೇರಿ ಒಟ್ಟು 846 ಮಂದಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next