Advertisement

ಸರ್ಕಾರಿ ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೋವಿಡ್ ಸೋಂಕಿತ ಆತ್ಮಹತ್ಯೆ

04:00 PM May 05, 2021 | Team Udayavani |

ವಿಜಯಪುರ: ಕೋವಿಡ್ ಸೋಂಕಿತ ರೋಗಿಯೊಬ್ಬ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

Advertisement

ಆಸ್ಪತ್ರೆ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಗರದ ಸುರೇಶ ಅಂಗಡಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಆಸ್ಪತ್ರೆಯಲ್ಲಿ ಸೋಂಕಿತ ಗರ್ಭಿಣಿಗೆ ಹೆರಿಗೆ, ತಾಯಿ-ಮಗು ಸುರಕ್ಷಿತ

ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: ಬಹ್ರೈನಿಂದ ಮಂಗಳೂರಿಗೆ ಬಂದ 40 ಮೆಟ್ರಿಕ್ ಟನ್ ಆಮ್ಲಜನಕ  

Advertisement

Udayavani is now on Telegram. Click here to join our channel and stay updated with the latest news.

Next