ದಾವಣಗೆರೆ : ಕೋವಿಡ್ ಸೋಂಕಿತನೊಬ್ಬ ಖಾಸಗಿ ಆಸ್ಪತ್ರೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮೃತ ವ್ಯಕ್ತಿಯನ್ನು ದಾವಣಗೆರೆಯ ಎಸ್.ಎಸ್. ಬಡಾವಣೆಯ ಶಶಿಧರ್(55) ಎನ್ನಲಾಗಿದೆ.
ಶಶಿಧರ್ ಅವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು ಆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎನ್ನಲಾಗಿದೆ.
ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಯ ತಮ್ಮ ಕೊಠಡಿಯಲ್ಲಿ ಫ್ಯಾನಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತಾಗಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.