ಗದಗ: ಕೋವಿಡ್-19 ಸೋಂಕಿನಿಂದಾಗಿ ಹೋಂ ಐಸೋಲೇಷನ್ ನಲ್ಲಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಲಲಿತಾ ಶಂಕರಪ್ಪ ರೋಣದ (45 ವ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ಸೋಂಕಿಗೆ ಬಲಿಯಾದ ಘಟಪ್ರಭಾ ಎಎಸ್ಐ
ಕಳೆದ ವಾರ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಹೀಗಾಗಿ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ರವಿವಾರ ಬೆಳಗಿನಜಾವ ಬಹಿರ್ದೆಸೆಗೆ ಎಂದು ತೆರಳಿದ್ದು, ಗ್ರಾಮದ ಹೊರವಲಯದ ಮರಕ್ಕೆ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.