Advertisement
ಜಾತ್ರೆಗಳು, ಮೇಳಗಳಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸ ಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯಲ್ಲಿ 250 ರೂ., ಇತರ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು.
Related Articles
Advertisement
ಸಮಾರಂಭಗಳಲ್ಲಿ ಅತಿಥಿಗಳ ಸಂಖ್ಯೆ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು-ತೆರೆದ ಸ್ಥಳಗಳಲ್ಲಿ 500 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರು, ಜನ್ಮದಿನ ಹಾಗೂ ಇತರ ಆಚರಣೆಗಳು ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಮರಣ ಅಥವಾ ಅಂತ್ಯಕ್ರಿಯೆ ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಶವಸಂಸ್ಕಾರ ಅಥವಾ ಸಮಾಧಿ ಕ್ರಿಯೆಯಲ್ಲಿ 50 ಜನರು, ಇತರ ಆಚರಣೆ 100 ಜನರು, ಧಾರ್ಮಿಕ ಆಚರಣೆ ಹಾಗೂ ಕಾರ್ಯಗಳು ತೆರೆದ ಸ್ಥಳಗ ಳಲ್ಲಿ 500 ಜನರು, ರಾಜಕೀಯ ಸಮಾವೇಶಗಳು ಅಥವಾ ಕಾರ್ಯಗಳು ತೆರೆದ ಸ್ಥಳಗಳಲ್ಲಿ 500 ಜನರಿಗೆ ಸೀಮಿತಗೊಳಿಸಲಾಗಿದೆ.
ಸಮಾರಂಭ ಸ್ಥಳಗಳಲ್ಲಿ ಆವರಣಗಳ ಮಾಲಕರು, ಸಮಾರಂಭಗಳ ಯೋಜಕರು/ಸಂಘಟಕರು ಅಥವಾ ಅತಿಥೇಯರು ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಸ್ವತಃ ಜವಾಬ್ದಾರರಾಗಿರುತ್ತಾರೆ. ತಾರಾ ಶ್ರೇಣಿಯ ಹೊಟೇಲ್‌ಗಳು ಕನಿಷ್ಠ 500 ಜನರು ಸೇರುವ ಸಾಮರ್ಥ್ಯ ಹೊಂದಿರುವ ಮದುವೆ ಸಭಾಂಗಣ/ಛತ್ರಗಳು ಹಾಗೂ ಅಥವಾ ಇಂತಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ 10,000 ರೂ. ಹಾಗೂ ಸಾರ್ವಜನಿಕ ಸಮಾ ರಂಭಗಳ ಆಯೋಜಕರಿಗೆ 10,000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.