Advertisement
ವಿಶ್ವವಿದ್ಯಾಲಯ ಕುಲಪತಿ ಪ್ರೊ. ರಾಮಚಂದ್ರಗೌಡ ಅವರಿಗೆ ಕೆಲ ದಿನಗಳ ಹಿಂದೆಯಷ್ಟೇ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಸದ್ಯ ಕ್ಯಾಂಪಸ್‌ನ ಬೋಧಕೇತರ ಸಿಬ್ಬಂದಿಗೆ ಪಾಸಿಟಿವ್ ಬಂದಿದೆ.
Related Articles
Advertisement
ಇದನ್ನೂ ಓದಿ : ಹನಗೋಡು, ನೇರಳಕುಪ್ಪೆಯಲ್ಲಿ ಹುಲಿ ಹೆಜ್ಜೆಗುರುತು ಪತ್ತೆ : ಭೀತಿಯಲ್ಲಿ ಗ್ರಾಮಸ್ಥರು
ವಿಶ್ವವಿದ್ಯಾಲಯದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕು ವ್ಯಾಪಿಸುತ್ತಿದ್ದರೂ ಆಡಳಿತ ಮಂಡಳಿ ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಬರಬೇಕಾದರೆ ವಿವಿಗೆ ರಜೆ ನೀಡಬೇಕಾದ ಅಗತ್ಯವಿದೆ. ಆದರೆ ಇದರ ಬಗ್ಗೆ ಅಧಿಕಾರಿಗಳು ರಜೆ ನೀಡುವ ಗೋಜಿಗೆ ಹೋಗುತ್ತಿಲ್ಲ. ಸೋಂಕು ಹರಡುತ್ತಿದ್ದರೂ ತರಗತಿಗಳು ನಡೆಯುತ್ತಿವೆ. ಅನೇಕ ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಇದ್ದರೂ ತರಗತಿಗೆ ಹಾಜರಾಗುತ್ತಿದ್ದು, ಇದರಿಂದ ಇನ್ನುಳಿದ ವಿದ್ಯಾವರ್ಥಿಗಳು ಮತ್ತು ಉಪನ್ಯಾಸಕರು ತರಗತಿಗೆ ಆತಂಕದಿಂದಲೇ ಬರುತ್ತಿದ್ದಾರೆ ಎಂದು ದೂರಿದರು.
ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ‘ಉದಯವಾಣಿ’ಯೊಂದಿಗೆ ಮಾತನಾಡಿ, ಸರ್ಕಾರದ ನಿಯಮಾವಳಿಯಂತೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಸೂಚಿಸಲಾಗುವುದು ಎಂದು ಹೇಳಿದರು.
ಪ್ರತಿಕ್ರಿಯಿಸಿದ ಕುಲಪತಿ ಪ್ರೊ. ರಾಮಚಂದ್ರಗೌಡ, ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದವರಿಗೆ ರಜೆ ನೀಡುವಂತೆ ಸೂಚನೆ ನೀಡಲಾಗಿದೆ. ಹಾಸ್ಟೆಲ್‌ನಲ್ಲಿ ವೈದ್ಯರನ್ನು ನೇಮಿಸಲಾಗಿದೆ. ಸದ್ಯ ಪರೀಕ್ಷೆ ಇರುವುದರಿಂದ ರಜೆ ನೀಡಲು ಬರುವುದಿಲ್ಲ. ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.