Advertisement

ನಿನ್ನೆ 155 ಜನರಿಗೆ ಕೋವಿಡ್ ಸೋಂಕು

01:37 PM Aug 05, 2020 | Suhan S |

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರಿದಿದ್ದು, ಮಂಗಳವಾರ 155 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆಯು 1757ಕ್ಕೆ ಏರಿಕೆಯಾಗಿದೆ.

Advertisement

ಅಲ್ಲದೇ ಮೂವರು ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆಯು 34ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಮಂಗಳವಾರ ದೃಢಪಟ್ಟ ಸೋಂಕಿತರ ಪೈಕಿ ಗಂಗಾವತಿ ತಾಲೂಕಿನಲ್ಲಿ 50 ಜನ, ಕೊಪ್ಪಳ ತಾಲೂಕಿನಲ್ಲಿ 84 ಜನ, ಕುಷ್ಟಗಿ ತಾಲೂಕಿನಲ್ಲಿ 18, ಯಲಬುರ್ಗಾ ತಾಲೂಕಿನಲ್ಲಿ 3 ಸೇರಿ ಒಟ್ಟಾರೆ 155 ಜನರಿಗೆ ಸೋಂಕು ದೃಢಪಟ್ಟಿದೆ. ಒಟ್ಟಾರೆ ಈ ವರೆಗೂ ಗಂಗಾವತಿ-929, ಕೊಪ್ಪಳ-471, ಕುಷ್ಟಗಿ-208, ಯಲಬುರ್ಗಾ-149 ಜನ ಸೇರಿದಂತೆ ಒಟ್ಟು 1757 ಜನರಿಗೆ ಸೋಂಕು ದೃಢಪಟ್ಟಿದೆ.

ಮಂಗಳವಾರ ಒಂದೇ ದಿನ ಮೂವರು ಮೃತಪಟ್ಟಿದ್ದು ಜಿಲ್ಲಾಡಳಿತ ಅವರ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ. ಇನ್ನೂ ಮಂಗಳವಾರ 61 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 942 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next