ತೆಕ್ಕಟ್ಟೆ : ಕುಂದಾಪುರ ತಾಲೂಕಿನ ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸಹಿತ ಬೇಳೂರು ಗ್ರಾ.ಪಂ.ವ್ಯಾಪ್ತಿಯ ಮೊಗೆಬೆಟ್ಟಿನ ಮೀನು ವ್ಯಾಪಾರದ ಮಹಿಳೆಯೋರ್ವರಿಗೆ ಇಂದು ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ಸಿಬಂದಿಯ ನಿವಾಸ ಹಾಗೂ ಮೊಗೆಬೆಟ್ಟಿನ ಮೀನಿನ ಅಂಗಡಿಯನ್ನು ಜು.12 ರಂದು ಸೀಲ್‌ಡೌನ್ ಮಾಡಲಾಗಿದೆ.
ಇವರಿಬ್ಬರ ಪ್ರಾಥಮಿಕ ಆರೋಗ್ಯ ತಪಾಸಣೆಯನ್ನು ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಲಾಗಿತ್ತು.
ಆ ಬಳಿಕ ಗಂಟಲು ದ್ರವ ಪರೀಕ್ಷೆಗಾಗಿ ಇವರಿಬ್ಬರ ಮಾದರಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದಾಗ ಕೋವಿಡ್ ಪಾಸಿಟಿವ್ ಇರುವುದು ಜು.12 ರಂದು ದೃಢಪಟ್ಟಿದೆ. ಸೋಂಕಿತರನ್ನು ಇದೀಗ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೀಲ್ ಡೌನ್ ಮಾಡುವ ಸಂದರ್ಭದಲ್ಲಿ ಕೋಟ ಪೊಲೀಸ್ ಠಾಣಾಧಿಕಾರಿ ಸಂತೋಷ್ ಬಿ.ಪಿ ಹಾಗೂ ಪೊಲೀಸ್ ಸಿಬಂದಿಗಳಾದ ರಾಜು ಹಾಗೂ ಮಂಜುನಾಥ ಮತ್ತಿತರರು ಸ್ಥಳದಲ್ಲಿ ಹಾಜರಿದ್ದರು.