Advertisement

ಸರ್ಕಾರಿ ಶಾಲೆಯ 21ವಿದ್ಯಾರ್ಥಿಗಳು, ಓರ್ವ ಶಿಕ್ಷಕರಲ್ಲಿ ಕೋವಿಡ್ ದೃಢ : ಶಾಲೆಗೆ 7 ದಿನ ರಜೆ

09:04 PM Jan 07, 2022 | Team Udayavani |

ಕೊರಟಗೆರೆ : ಪಟ್ಟಣದ ಬೆಸ್ಕಾಂ ಇಲಾಖೆ ಮುಂಭಾಗದಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಓರ್ವ ವಿದ್ಯಾರ್ಥಿನಿಗೆ ಕೆಮ್ಮು ನೆಗಡಿ ಜ್ವರ ಇದ್ದ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದಿದೆ.

Advertisement

ಎಚ್ಚೆತ್ತುಕೊಂಡ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಅದೇ ತರಗತಿಯಲ್ಲಿ ಓದುತ್ತಿದ್ದ ಎಲ್ಲ ಮಕ್ಕಳಿಗೂ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕರೆ ಮಾಡಿ ತಿಳಿಸಿ ತಪಾಸಣೆ ನಡೆಸಲು ತಿಳಿಸಿದ್ದಾರೆ .

ನಂತರ ಶಾಲೆಗೆ ಆಗಮಿಸಿದ ವೈದ್ಯರ ತಂಡ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿನಿಯರಿಗೂ ತಪಾಸಣೆ ನಡೆಸಿದ್ದಾರೆ 178ಜನ ವಿದ್ಯಾರ್ಥಿನಿಯರಲ್ಲಿ 21 ಜನ ವಿದ್ಯಾರ್ಥಿನಿಯರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದಿದೆ.

ಓರ್ವ ಶಿಕ್ಷಕರು ಸೇರಿದಂತೆ  22 ಜನ ವಿದ್ಯಾರ್ಥಿನಿಯರು ಸದ್ಯಕ್ಕೆ ತಮ್ಮ ತಮ್ಮ ಮನೆಗಳಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸುವಂತೆ ವೈದ್ಯರು ಅವರ ಪೋಷಕರಿಗೆ ತಿಳಿಸಿದ್ದಾರೆ .

ಈ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 8ನೇ ತರಗತಿ 9ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ಸುಮಾರು 582ಜನ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ.

Advertisement

ಇದನ್ನೂ ಓದಿ : ಪಿರಾನ್ಹಾ ಮೀನು ದಾಳಿಗೆ ನಾಲ್ವರು ಸಾವು, ಹಲವು ಮಂದಿಗೆ ಗಾಯ

ಶಾಲೆಗೆ 1ವಾರ ರಜಾ ಘೋಷಿಸಿದ ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್ ಶಾಲೆಯ 582 ಜನ ವಿದ್ಯಾರ್ಥಿನಿಯರು ಸೇರಿದಂತೆ ಶಾಲೆಯ ಶಿಕ್ಷಕರು ಅಡುಗೆ ಸಿಬ್ಬಂದಿಗಳು ಹಾಗೂ ಶಾಲೆಗೆ ಸಂಬಂಧಿಸಿದಂತೆ ಯಾರೇ ಇದ್ದರೂ ಕೂಡ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸುವಂತೆ ಮೇಲಧಿಕಾರಿಗಳ ಸೂಚನೆ ಮೇರೆಗೆ ತಾಲ್ಲೂಕು ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್ ಎನ್.ಎಸ್ ಮತನಾಡಿ ಶಾಲೆಯ ಎಲ್ಲಾ ಮಕ್ಕಳನ್ನು ಕೋವಿಡ್ ಪರೀಕ್ಷೆ ಮಾಡಿಸಿ ಕೊಳ್ಳಲು ಶಿಕ್ಷಕರಿಗೆ, ಪೋಷಕರಿಗೆ ತಿಳಿಸಲಾಗಿದೆ. ಶಾಲೆಯ ಪಕ್ಕದಲ್ಲಿರುವ ವಿದ್ಯಾರ್ಥಿನಿಲಯದಲ್ಲಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ಮಾಡಿಸಲು ಸಂಬಂಧಿಸಿದ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಶಾಲೆಗೆ  ಏಳು ದಿನ ರಜೆ ಘೋಷಿಸಲಾಗಿದೆ. ಮತ್ತು ಶಾಲೆಯ ಸುತ್ತಮುತ್ತ ಕಂಟೈನ್ ಮೆಂಟ್ ಝೋನ್ ಮಾಡಲಾಗಿದೆ ಎಂದು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next