Advertisement

ಬಳ್ಳಾರಿ: ಪೊಲೀಸ್ ಸಿಬ್ಬಂದಿ ಸೇರಿ ಮೂವರಿಗೆ ಕೋವಿಡ್ ಸೋಂಕು ದೃಢ

05:39 PM May 31, 2020 | keerthan |

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಮತ್ತೆ ಮೂವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿಕೆ ನೀಡಿದ್ದಾರೆ.

Advertisement

ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸೇರಿ ಮೂರು ಜನ ಪುರುಷರಿಗೆ ಕೋವಿಡ್-19 ಸೋಂಕು ಅಂಟಿದೆ. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಒಂದು ಪ್ರಕರಣ, ಹೊಸಪೇಟೆಯ 88 ಮುದ್ಲಾಪುರದಲ್ಲೊಬ್ಬರಿಗೆ ಮತ್ತು ಕೊಟ್ಟೂರು ಪಟ್ಟಣದಲ್ಲಿ ಒಬ್ಬರಿಗೆ ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಸೋಂಕು ಪತ್ತೆಯಾದ ಪೊಲೀಸ್ ಪೇದೆಯು ರಜೆಗಾಗಿ ದಾವಣಗೆರೆಗೆ ಹೋಗಿ ಬಂದಿದ್ದರು ಎನ್ನಲಾಗಿದೆ. ಇವರೆಲ್ಲರ ಸಂಪರ್ಕದಲ್ಲಿ ಇರುವವರನ್ನು ಪತ್ತೆ ಹಚ್ಚಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next