Advertisement

ಕಾರ್ಕಳ ನಗರ ಠಾಣೆ ಎಸ್ ಐ ಮಧು ಅವರಿಗೆ ಕೋವಿಡ್ ಪಾಸಿಟಿವ್

04:01 PM May 04, 2021 | Team Udayavani |

ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್ ಐ ಮಧು ಬಿ.ಇ ರವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ‌. ಇತ್ತೀಚೆಗೆ ಶೀತ ಕಾಣಿಸಿಕೊಂಡಿತ್ತು. ಬಳಿಕ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಸೋಮವಾರ ರಾತ್ರಿ ಪರೀಕ್ಷಾ ವರದಿ ಬಂದಿದ್ದು, ಪಾಸಿಟಿವ್ ವರದಿ ಬಂದಿದೆ.

Advertisement

ಭಾನುವಾರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಾಲೂಕು ಆಸ್ಪತ್ರೆಗೆ ಆಗಮಿಸಿದ್ದು, ಈ ವೇಳೆ ಕರ್ತವ್ಯ ನಿರ್ವಹಿಸಿದ್ದರು. ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಠಾಣೆಯ ಮಹಿಳಾ ಸಿಬ್ಬಂದಿಯೋರ್ವರಿಗೂ ಎರಡು ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿದ್ದು. ವಾಸಿಟಿವ್ ವರದಿ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next