Advertisement
ವಾರದಲ್ಲಿ ಉಲ್ಬಣಜಿಲ್ಲೆಯಲ್ಲಿ ಸರಿಸುಮಾರು 3 ತಿಂಗಳ ಅನಂತರ ಕೊರೊನಾ ಸೋಂಕು 100ರ ಗಡಿ ದಾಟಿದೆ. ಕಳೆದ ಸೆ. 16ರಂದು 113 ಮಂದಿಗೆ ಸೋಂಕು ಬಂದಿತ್ತು. ಆಬಳಿಕ ಸೋಂಕಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಜನವರಿ ತಿಂಗಳಿನಿಂದ ದಿನಂಪ್ರತಿ ಸೋಂಕು ಹೆಚ್ಚಳವಾಗುತ್ತಿದೆ. ಜ.1ರಂದು 28, 2ರಂದು 54, 3ರಂದು 43, 4ರಂದು 72, 5ರಂದು 88, 6ರಂದು 92 ಮಂದಿಗೆ ಸೋಂಕು ದೃಢಪಟ್ಟಿತ್ತು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಏರಿಕೆ ಕಂಡಿದ್ದು, ಶುಕ್ರವಾರ ದಾಖಲೆಯ 211 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರು, ಮೈಸೂರು ಹೊರತುಪಡಿಸಿ ದ.ಕ. ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಗುರುವಾರ 106 ಮಂದಿಗೆ ಸೋಂಕು ದೃಢಪಟ್ಟಿತ್ತು. ಒಬ್ಬರು ಸಾವನ್ನಪ್ಪಿದ್ದು, ಒಟ್ಟು 33 ಮಂದಿ ಗುಣಮುಖರಾಗಿದ್ದಾರೆ. 713 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಕ್ಲಸ್ಟರ್ ವಲಯ
ಮಂಗಳೂರಿನ ಎರಡು ಖಾಸಗಿ ಮೆಡಿಕಲ್ ಕಾಲೇಜು ವಸತಿ ನಿಲಯ ಮತ್ತು ಒಂದು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯ ಪ್ರದೇಶವನ್ನು ಕ್ಲಸ್ಟರ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮೂರೂ ವಸತಿ ನಿಲಯಗಳಲ್ಲಿ ಒಟ್ಟು 56 ಮಂದಿಗೆ ಕೊರೊನಾ ದೃಢಪಟ್ಟಿದ್ದು, 961 ಮಂದಿಯನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದೆ. ಕೊರೊನಾ ದೃಢಪಟ್ಟವರು ಕೇರಳ ಮೂಲದ ಟ್ರಾವೆಲ್ ಹಿಸ್ಟರಿ ಹೊಂದಿದವರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Related Articles
Advertisement
ಕಾಸರಗೋಡು: 71 ಮಂದಿಗೆ ಸೋಂಕುಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 71 ಮಂದಿಗೆ ಕೊರೊನಾ ದೃಢಪಟ್ಟಿದೆ. 34 ಮಂದಿ ಗುಣಮುಖರಾಗಿದ್ದಾರೆ. 506 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳದಲ್ಲಿ 5,296 ಪ್ರಕರಣ
ಕೇರಳದಲ್ಲಿ ಶುಕ್ರವಾರ 5,296 ಮಂದಿಗೆ ಕೊರೊನಾ ದೃಢಪಟ್ಟಿದೆ. 2,404 ಮಂದಿ ಗುಣಮುಖರಾಗಿದ್ದಾರೆ. 35 ಮಂದಿ ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 49,305ಕ್ಕೇರಿದೆ. ಕೊಡಗು: ಮಂದಿಗೆ 15 ಕೊರೊನಾ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಂದಿಗೆ 15 ಕೊರೊನಾ ದೃಢಪಟ್ಟಿದೆ. ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 231 ಸಕ್ರಿಯ ಪ್ರಕರಣಗಳಿವೆ. 41 ಕಂಟೈನ್‌ಮೆಂಟ್ ವಲಯಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.47 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 25,462 ಮಂದಿಗೆ ಲಸಿಕೆ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 25,462 ಮಂದಿಗೆ ಲಸಿಕೆ ಹಾಕಲಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 20,219 ಮಂದಿಗೆ ಲಸಿಕೆ ನೀಡಲಾಗಿದ್ದು 15,784 ಮಂದಿಗೆ ಮೊದಲ ಮತ್ತು 4,435 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಅಭಿಯಾನ ನಡೆಯುತ್ತಿದ್ದು, ಜ. 7ರಂದು 14,676 ಮಂದಿ ಮಕ್ಕಳು ಲಸಿಕೆ ಪಡೆದುಕೊಂಡಿದ್ದಾರೆ. ಈವರೆಗೆ ಒಟ್ಟು 84,545 ಮಂದಿ ಮಕ್ಕಳು ಲಸಿಕೆ ಪಡೆದಿದ್ದಾರೆ. ಉಡುಪಿ: 5,243 ಮಂದಿಗೆ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 5,243 ಮಂದಿಗೆ ಲಸಿಕೆ ಹಾಕಲಾಗಿದ್ದು 3,048 ಮಂದಿ ಮೊದಲ ಹಾಗೂ 2,195 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಜ. 3ರಿಂದ ಇಲ್ಲಿಯವರೆಗೆ ಶೇ. 59.5 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ.