Advertisement
ಶುಕ್ರವಾರದಿಂದ ಜಿಲ್ಲಾಸ್ಪತ್ರೆ ಸಹಿತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೋವಿಡ್ ತಪಾಸಣೆ ನಡೆಸಲು ಉದ್ದೇಶಿಸಲಾಗಿದೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಶಂಕಿತರ ತಪಾಸಣೆ ನಡೆಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಈಗಾಗಲೇ ಆರೋಗ್ಯ ಇಲಾಖೆಯೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದಾರೆ.ಜಿಲ್ಲೆಯಲ್ಲಿ ಪ್ರಕರಣಗಳು ಕಂಡುಬಂದ ಬಳಿಕ ಅಥವಾ ಅದಕ್ಕೂ ಮುನ್ನ ಗಡಿಭಾಗಗಳಲ್ಲಿ ತಪಾಸಣೆ ನಡೆಸುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ನೀಡುತ್ತಿರುವ ಎಲ್ಲ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಸೋಂಕು ಲಕ್ಷಣವುಳ್ಳವರನ್ನು ತಪಾಸಣೆ ಮಾಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಾಗಿದೆ. ಆಕ್ಸಿಜನ್ ಪ್ಲಾಂಟ್‌ಗಳಲ್ಲಿ ಆಕ್ಸಿಜನ್ ದಾಸ್ತಾನು ಇರಿಸಲಾಗಿದೆ. ವೆಂಟಿಲೇಟರ್‌ಗಳ ಪರಿಶೀಲನೆ ನಡೆದಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಜನರಿಗೆ ಅರಿವು ಮೂಡಿಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಿ.ಐ. ಗಡಾದ್ ತಿಳಿಸಿದ್ದಾರೆ. ಇದನ್ನೂ ಓದಿ: Tragedy: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು