Advertisement

ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನುಸರಿಸಬೇಕು: ಕಾಂಗ್ರೆಸ್ ತೀವ್ರ ಆಕ್ಷೇಪ

08:14 PM Dec 21, 2022 | Team Udayavani |

ನವದೆಹಲಿ : ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಬೇಕು ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಬುಧವಾರ ಹೇಳಿಕೆ ನೀಡಿದ್ದಾರೆ. ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಅನುಸರಿಸಬೇಕು ಅಥವಾ “ದೇಶದ ಹಿತಾಸಕ್ತಿ” ಗಾಗಿ ಯಾತ್ರೆಯನ್ನು ಸ್ಥಗಿತಗೊಳಿಸಬೇಕು ಎಂದು ಪತ್ರದಲ್ಲಿ ಬರೆದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದೆ.

Advertisement

ಚೀನದಲ್ಲಿ ವ್ಯಾಪಕ ಕೋವಿಡ್ ಉಲ್ಬಣದ ಬೆನ್ನಲ್ಲೇ ಭಾರತದಲ್ಲಿ ಒಮಿಕ್ರಾನ್ ರೂಪಾಂತರಿಯ ಬಿಎಫ್.7ನ 3 ಪ್ರಕರಣಗಳು ವರದಿಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಂಡವಿಯಾ, ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದವರಲ್ಲಿ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ. ಈ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ಹಿಮಾಚಲ ಪ್ರದೇಶ ಸಿಎಂ ಕೂಡ ಪಾಸಿಟಿವ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ : ದೇಶದಲ್ಲಿ ಮತ್ತೆ ಕೋವಿಡ್ ಆತಂಕ ; ಏನಿದು ಬಿಎಫ್.7 ರೂಪಾಂತರಿ ?

ರಾಜಸ್ಥಾನದಲ್ಲಿ ಕೋವಿಡ್ 19 ಸ್ಥಿತಿಗತಿಯ ಕುರಿತು ಖಚಿತಪಡಿಸಿಕೊಳ್ಳಲು, ನಾನು ತಜ್ಞರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದೇನೆ ಮತ್ತು ಕೋವಿಡ್ 19 ದೇಶದಲ್ಲಿ ಹರಡದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಒಬ್ಬ ಮಂತ್ರಿ ಅವರನ್ನು ಹೇಗೆ ಪ್ರಶ್ನಿಸಬಹುದು ಎಂದು ಯಾರಾದರೂ ಭಾವಿಸಿದರೆ, ಅವರ ಮನಸ್ಥಿತಿಗೆ ನಾವು ಏನು ಮಾಡಬಹುದು? ಈ ಬಗ್ಗೆ ನನ್ನನ್ನು ಪ್ರಶ್ನಿಸುವುದು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದಂತೆ ಎಂದು ಮಾಂಡವಿಯಾ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next