Advertisement

ಪಾಸಿಟಿವ್ ಸ್ಟೋರಿ :  ಕೋವಿಡ್ ಗೆದ್ದ ಒಂದೇ ಕುಟುಂಬದ 16 ಮಂದಿ..!

06:36 PM May 21, 2021 | Team Udayavani |

ಹುಬ್ಬಳ್ಳಿ : ಕೋವಿಡ್ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,  ಆದರೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಮಂದಿ  ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Advertisement

ಇದನ್ನೂ ಓದಿ : ಒಬ್ಬ ಮಹಿಳೆಗೆ ಅನ್ಯಾಯವಾಗಿದೆ, ಶೀಘ್ರವೇ ಉಚ್ಛ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ : ಸಾವಂತ್

ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಮಂದಿ ಇದೇ ತಿಂಗಳು 3ನೇ ತಾರೀಖಿನಂದು ಕೋವಿಡ್ ಪಾಸಿಟಿವ್ ಆಗಿದ್ದರು, ಹೋಮ್ ಐಸೋಲೇಷನ್ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ ಅಷ್ಟೇ ಅಲ್ಲದೆ ಇದರಲ್ಲಿ ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಈ ಪೈಕಿ 45 ವರ್ಷ ಮೇಲ್ಪಟ್ಟ ನಾಲ್ವರು ಈ ಮೊದಲೇ ಎರಡನೆ ಡೊಸ್ಸ್ ವ್ಯಾಕ್ಸಿನೇಷನ್ ಮಾಡಿಸಿಕೊಂಡಿದ್ದರು ಹಾಗೂ ವ್ಯಾಕ್ಸಿನೇಷನ್ ಮಾಡಿಸಿಕೊಂಡಿದ್ದರು ಇತರ  ಮೂರು ಮಂದಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.

ಈ ಕುರಿತಾಗಿ ಪ್ರತಿಕ್ರಿಯಿಸಿದ ಕುಟುಂಬದ ಮುಖ್ಯಸ್ಥ ಮಲ್ಲಯ್ಯ ಶಿವಳ್ಳಿಮಠ,  ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು  ಕಾಣಿಸಿಕೊಂಡಾಗ  ಕೋವಿಡ್ ಟೆಸ್ಟ್ ಮಾಡಿಸಿಕೊಂಡು  ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು ಹಾಗೂ  ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ  ಭಯಪಡದೆ ಆತ್ಮಸ್ಥೈರ್ಯದಿಂದ ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೇ ಸೂಚನೆಗಳನ್ನು  ತಪ್ಪದೆ ಪಾಲಿಸಿದೆವು, ಎಂದು ಹೇಳಿದರು.

ಪೋಟೊದಲ್ಲಿ ಇರುವಂತೆ ಎಡದಿಂದ ಬಲಕ್ಕೆ ರಾಜು(34), ಶ್ರೇಯಾ (10ತಿಂಗಳು), ಲಕ್ಷ್ಮಿ(25), ವೈಭವಿ(1), ಶಶಿಕಲಾ(24), ಸಮರ್ಥ (2),  ಸಹನಾ(16),ವೈಷ್ಣವಿ(2),ಗಿರಿಜಮ್ಮ(60),ಶರಣಯ್ಯಾ(9), ಮಲ್ಲಯ್ಯ (63),ಮಹಾಂತಯ್ಯ(60), ಸಿದ್ದರಾಮಯ್ಯ(59) ಮಲ್ಲಿಕಾರ್ಜುನ (25), ಮಲ್ಲಿಕಾರ್ಜುನಯ್ಯಾ(28), ಮೃತ್ಯುಂಜಯ(27).

Advertisement

ಇದನ್ನೂ ಓದಿ : ಮಾಜಿ ಸ್ಪೀಕರ್‌ ಕೆ.ಆರ್.ಪೇಟೆ ಕೃಷ್ಣ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

Advertisement

Udayavani is now on Telegram. Click here to join our channel and stay updated with the latest news.

Next