Advertisement
ಜಯನಗರ ಸಾವ೯ಜನಿಕ ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ವಿಧಾನಸೌಧಕ್ಕೆ ಮರಳಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಭಾನುವಾರ ಈ ವಿವರ ನೀಡಿದರು.
Related Articles
Advertisement
ನಗರದಲ್ಲಿ ಅಗತ್ಯ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾಗಿ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಹಾಲಿ ೧೦೮ ಸೇವೆಯಡಿ ಕಾಯ೯ ನಿವ೯ಹಿಸುತ್ತಿರುವ ಆಂಬ್ಯುಲೆನ್ಸ್‌ಗಳ ಹೊರತಾಗಿ ನಗರದ ಪ್ರತಿ ವಾಡಿ೯ಗೆ ಎರಡುರಂತೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತದೆ. ಯಾರಿಗೆ ಆಗಲಿ ಅಗತ್ಯವಿದ್ದಲ್ಲಿ 108 ಸಂಖ್ಯೆಗೆ ಕರೆ ಮಾಡಿ ಸೌಲಭ್ಯ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ಹೆಚ್ಚು ವಸೂಲಿ ಮಾಡುವಂತಿಲ್ಲ : ಕೆಲ ಮಾಧ್ಯಮಗಳಲ್ಲಿ ಕೋವಿಡ್ ಪರೀಕ್ಷೆಗೆ ನಾಲ್ಕು ಅಥವಾ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸಕಾ೯ರ ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿಗೆ ಟೆಸ್ಟ್ ಮಾಡಲಾಗಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸಕಾ೯ರದ ವತಿಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ, ನಮ್ಮಿಂದ ಕಳುಹಿಸದ ರೋಗಿಗಳಿಗೆ 2,200ರೂ. ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ. ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್‌ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್‌ಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್‌ಗಳೂ ಕೂಡ ಪೂಣ೯ ಪ್ರಮಾಣದಲ್ಲಿ ಟೆಸ್ಟ್‌ಗಳನ್ನು ಮಾಡಲೇ ಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಆತಂಕ ಬೇಡ : ನಮ್ಮಲ್ಲಿ ಕೋವಿಡ್ ಕೇರ್ , ಸಕಾ೯ರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ೮೧೯ ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 1899 ಹಾಸಿಗೆ ಪೈಕಿ 779 ಲಭ್ಯವಿವೆ, ಸಕಾ೯ರಿ ಆಸ್ಪತ್ರೆಗಳಲ್ಲಿ 611 ರಲ್ಲಿ ಇನ್ನೂ 105 ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ 2734 ಹಾಸಿಗೆ ನೀಡಬೇಕಿದ್ದು ಇದುವರೆಗೆ 116 ಮಾತ್ರ ನೀಡಿದ್ದಾರೆ.
ಹೀಗಾಗಿ ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.
ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರು ಇದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ನಮ್ಮವೈದ್ಯರು ಮತ್ತು ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ. ಅವರು ನಾಲ್ಕು ತಿಂಗಳುಗಳಿಂದ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ವಾಸ್ತವ ಸಂಗತಿ ಅಥ೯ ಮಾಡಿಕೊಂಡು ಸಾವ೯ಜನಿಕರು, ಪ್ರತಿ ಪಕ್ಷನಾಯಕರು ಸಕಾ೯ರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾನೂನು ಜಾರಿಗೆ ಚಿಂತನೆಹಿರಿಯ ನಾಗರೀಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವ ಸವಾಲು ಎಲ್ಲರ ಮೇಲಿದೆ. ಅದಕ್ಕಾಗಿಯೇ ಅವರನ್ ಹೊರ ಕಳುಹಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ. ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 60 ವಯಸ್ಸಿಗಿಂತ ಮೇಲ್ಪಟ್ಟವರು, ಜ್ವರ ಲಕ್ಷಣಗಳಿರುವ ಹಿರಿಯ ನಾಗರೀಕರನ್ನು ಟೆಸ್ಟ್‌ಗೆ ಒಳಪಡಿಸುವಂತೆ ಕಾಯ೯ಪಡೆಗಳಿಗೆ ಸೂಚನೆ ನೀಡಲಾಗಿದೆ. ಹಿರಿಯ ನಾಗರೀಕರನ್ನು ಮನೆಗಳಿಂದ ಹೊರ ಬಿಡಬಾರದು ಎಂಬ ಕಾನೂನು ಜಾರಿಗೂ ಚಿಂತನೆ ನಡೆಸಲಾಗುತ್ತಿದೆ. ತಜ್ಞರು ಮತ್ತು ಪ್ರಮುಖರ ಜತೆ ಈ ಕುರಿತು ಚಚಿ೯ಸಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.