Advertisement

ಮಹಾರಾಷ್ಟ್ರ, ಕೇರಳ, ಕರ್ನಾಟಕದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ : ಗೋವಾ

05:04 PM Aug 03, 2021 | Team Udayavani |

ಪಣಜಿ : ಮಹಾರಾಷ್ಟ್ರ, ಕೇರಳ, ಕರ್ನಾಟಕ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹೊರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ನಾಗರಿಕರಿಗೆ ಗೋವಾ ಸರ್ಕಾರ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಗೋವಾ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ.

Advertisement

ಇದನ್ನೂ ಓದಿ :  ಅಮಿತ್ ಶಾ,  ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಭೇಟಿ..!

ಕೇರಳದಿಂದ ಗೋವಾಕ್ಕೆ ರೈಲ್ವೆಯ ಮೂಲಕ ಜನರು ಆಗಮಿಸುವ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿಯೂ ಕಡ್ಡಾಯ ತಪಾಸಣೆ ನಡೆಸಲಾಗುತ್ತಿದೆ. ಇನ್ನು, ಗೋವಾಕ್ಕೆ ಹೊರ ರಾಜ್ಯಗಳಿಂದ ಆಗಮಿಸುವವರಿಗೆ 72 ಗಂಟೆಗಳ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ.

ಕರ್ನಾಟಕದಿಂದ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸುತ್ತಿದ್ದರೂ ಕೂಡ ಗೋವಾಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ಆ್ಯಂಟಿಜನ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಿದೆ. ಗೋವಾದ ಎಲ್ಲ ಗಡಿಗಳಲ್ಲಿಯೂ ಕೋವಿಡ್ ತಪಾಸಣಾ ಕೇಂದ್ರವನ್ನು ಸರ್ಕಾರ ಸ್ಥಾಪಿಸಿದೆ. ಗೋವಾಕ್ಕೆ ಆಗಮಿಸುವರು ಯಾರು ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿಲ್ಲವೋ ಅವರು ಗೋವಾ ಗಡಿಯಲ್ಲಿ 270 ರೂ ಶುಲ್ಕ ಭರಿಸಿ ಕೋವಿಡ್ ತಪಾಸಣೆ ಮಾಡಿಕೊಂಡು ನೆಗೆಟಿವ್ ವರದಿ ಬಂದ ನಂತರ ಮಾತ್ರ ಗೋವಾ ಪ್ರವೇಶಿಸಬಹುದಾಗಿದೆ, ಒಂದು ವೇಳೆ ಕೋವಿಡ್ ಸೋಂಕು ದೃಢಪಟ್ಟರೆ ಅಂತವರು ತಮ್ಮ ರಾಜ್ಯಕ್ಕೆ ಮರಳಿ ತೆರಳಬೇಕಾಗಲಿದೆ.

ಇದನ್ನೂ ಓದಿ : ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

Advertisement
Advertisement

Udayavani is now on Telegram. Click here to join our channel and stay updated with the latest news.

Next