ಶಿವಮೊಗ್ಗ: ಕೋವಿಡ್ ನಿಯಮ ಪಾಲಿಸಬೇಕಾದ ಸಚಿವರಿಂದಲೇ ನಿಯಮ ಉಲ್ಲಂಘನೆಯಾಗಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾಸ್ಕ್ ಧರಿಸದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಈಶ್ವರಪ್ಪ ಮತ್ತು ಅಂಬೇಡ್ಕರ್ ನಿಗಮದ ಅಧ್ಯಕ್ಷ ಹಾಗೂ ಮುಳಬಾಗಿಲು ಶಾಸಕ ನಾಗೇಶ್ ಮಾಸ್ಕ್ ಧರಿಸುವುದನ್ನು ಮರೆತಿದ್ದರು.
ಇವರೊಂದಿಗೆ ಸಚಿವರ ಪುತ್ರ ಹಾಗೂ ಜಿ.ಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೂ, ಮಾಸ್ಕ್ ನಿಯಮಕ್ಕೂ ತಮಗೂ ಸಂಬಂಧವೇ ಇಲ್ಲದಂತಿದ್ದರು.
ಇದನ್ನೂ ಓದಿ:ಮಾಸ್ಕ್ ಧರಿಸದ ಮಕ್ಕಳಿಗೆ ಶಾಲೆಗೆ ಪ್ರವೇಶ ನೀಡಬೇಡಿ : ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ
ಅಂಬೇಡ್ಕರ್ ನಿಗಮದಡಿ ವಿವಿಧ ಫಲಾನುಭವಿಗಳಿಗೆ ಚೆಕ್, ಉಪಕರಣ ವಿತರಿಸುವ ಕಾರ್ಯಕ್ರಮದಲ್ಲಿ ಸುಮಾರು 200 ಕ್ಕೂ ಅಧಿಕ ಜನರು ಭಾಗಿಯಾಗಿದ್ದರು. ಕಾರ್ಯಕ್ರಮದ ಮಧ್ಯದಲ್ಲಿ ಸಚಿವ ಈಶ್ವರಪ್ಪ ಮಾಸ್ಕ್ ತರಿಸಿ ಹಾಕಿಕೊಂಡರು. ಸಂಸದ ಬಿ.ವೈ. ರಾಘವೇಂದ್ರ, ಮೇಯರ್ ಸುನೀತಾ ಅಣ್ಣಪ್ಪ ಮಾಸ್ಕ್ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.