ಸಕಲೇಶಪುರ: ಮಾಸ್ಕ್ ಹಾಕದವರಿಗೆ, ಸಾಮಾಜಿಕ ಅಂತರ ಕಾಪಾಡದವರಿಗೆ, ಕೋವಿಡ್ ನಿಯಮ ಉಲ್ಲಂಘಿ ಸುವವರಿಗೆಕಡ್ಡಾಯವಾಗಿ ದಂಡ ವಿಧಿಸಲು ಪುರಸಭಾಮುಖ್ಯಾಧಿಕಾರಿಗಳು ಹಾಗೂ ಪಂಚಾಯ್ತಿ ಅಭಿವೃದ್ಧಿಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತ್ರೈಮಾಸಿಕ ಸಭೆ ಹಾಗೂ ಕೋವಿಡ್ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದರು.
ಅಡ್ಡಪರಿಣಾಮವಿಲ್ಲ: ತಾಲೂಕಿನಲ್ಲಿಯೂ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದು ಆತಂಕಕಾರಿ. ಸರ್ಕಾರದ ನಿಯಮಗಳನ್ನು ಸಾರ್ವಜನಿಕರು ಪಾಲನೆ ಮಾಡದಿರುವುದೇಕೋವಿಡ್ ಹೆಚ್ಚಳಕ್ಕೆ ಕಾರಣವಾಗಿದೆ. ಸರ್ಕಾರ ವಿಧಿಸುವ ಕೋವಿಡ್ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಈ ನಿಟ್ಟಿನಲ್ಲಿ ಕಡ್ಡಾಯವಾಗಿ ಪ್ರತಿಯೋರ್ವರು ಮಾಸ್ಕ್ ಧರಿಸಬೇಕು ಹಾಗೂಮನೆಯಿಂದ ಹೊರ ಬರುವುದನ್ನು ಆದಷ್ಟು ಕಡಿಮೆಮಾಡಬೇಕು. 45 ವರ್ಷ ದಾಟಿದ ಎಲ್ಲಾ ನಾಗರಿಕರೂಮೊದಲಿಗೆ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದು ಹೇಳಿದರು.
ತಾಲೂಕಿನಲ್ಲೇ ಚಿಕಿತ್ಸೆ ನೀಡಿ: ಟಿಎಚ್‌ಒ ಮಹೇಶ್ ಅವರಿಂದ ಕೋವಿಡ್ ಪ್ರಕರಣಗಳ ಕುರಿತು ವರದಿ ಪಡೆದ ನಂತರ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಉತ್ತಮ ಚಿಕಿತ್ಸೆ ದೊರೆಯುವುದು ಅನುಮಾನ. ಈ ಹಿನ್ನೆಲೆ ಯಾವುದೇ ಕೋವಿಡ್ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಕಳುಹಿಸದೇ ತಾಲೂಕಿನಲ್ಲಿಯೇ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿ: ಇದೇ ವೇಳೆ ಶಾಸಕರು ಗ್ರಾಮ ಮಟ್ಟದ ಕೊರೊನಾ ಕಾರ್ಯಪಡೆಯ ಸಭೆಯನ್ನು ಪ್ರತಿ ವಾರ ತಪ್ಪದೇ ಮಾಡಿ ಸಾರ್ವಜನಿಕರಿಗೆ ಕೋವಿಡ್ ಬಗ್ಗೆಜಾಗೃತಿ ಮೂಡಿಸುವಂತೆ ಸೂಚಿಸಿದರು. ತಾಲೂಕು ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಮಾತನಾಡಿ, ಗ್ರಾಪಂಗಳ ವ್ಯಾಪ್ತಿಯಲ್ಲಿ ಕೋವಿಡ್ ಹರಡದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪಟ್ಟಣಕ್ಕೆ ಸೀಮಿತಗೊಳ್ಳುತ್ತಿದ್ದ ಲಾಕ್ ಡೌನ್ ಈ ಬಾರಿ ಗ್ರಾಮಾಂತರ ಪ್ರದೇಶಗಳಲ್ಲೂ ಕಠಿಣವಾಗಿ ಜಾರಿಗೆ ತರಲಾಗಿದೆ. ಪಿಡಿಒ, ಗ್ರಾಪಂ ಸಿಬ್ಬಂದಿ ಈ ನಿಟ್ಟಿನಲ್ಲಿಬಹಳ ಶ್ರಮಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಕಂಡು ಬಂದಲ್ಲಿ ಅಂತಹ ಕಡೆ ತಾತ್ಕಾಲಿಕವಾಗಿ ಟ್ಯಾಂಕರ್‌ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜೈಕುಮಾರ್, ಡಿವೈಎಸ್‌ಪಿ ಗೋಪಿ ಮತ್ತಿತರ ಅಧಿಕಾರಿಗಳು ಇದ್ದರು.