Advertisement

ಮಾದರಿ ಸಂಗ್ರಹ ಪರೀಕ್ಷೆಯಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಸಚಿವರ ಸೂಚನೆ

07:03 PM Jun 12, 2020 | sudhir |

ಯಾದಗಿರಿ: ಸರ್ಕಾರದ ಮಾರ್ಗಸೂಚಿಗಳನ್ವಯ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಮಾದರಿಗಳನ್ನು ಪರೀಕ್ಷೆ ಮಾಡಬೇಕು. ಪರೀಕ್ಷೆಯಲ್ಲಿ ಲೋಪವಾಗಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.

Advertisement

ಯಾದಗಿರಿ ಹೊರವಲಯದ ಕೋವಿಡ್19 ಆಸ್ಪತ್ರೆ (ಹೊಸ ಜಿಲ್ಲಾಸ್ಪತ್ರೆ)ಯಲ್ಲಿ ಕೋವಿಡ್ ಪರೀಕ್ಷೆ ನಡೆಸುವ ಆರ್.ಟಿ.ಪಿ.ಸಿ.ಆರ್. ಲ್ಯಾಬ್ ಶುಕ್ರವಾರ ಉದ್ಘಾಟಿಸಿದ ಬಳಿಕ ಲ್ಯಾಬ್ ಪರಿಶೀಲಿಸಿದ ಸಚಿವರು, ಲ್ಯಾಬ್ ಕಾರ್ಯನಿರ್ವಹಣೆ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಲ್ಯಾಬ್‌ನಲ್ಲಿ ಕಾರ್ಯನಿರ್ವಹಿಸುವ ತಂತ್ರಜ್ಞರು ಮತ್ತು ಸಿಬ್ಬಂದಿಗಳು ವೈಯಕ್ತಿಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಆರ್.ಟಿ.ಪಿ.ಸಿ.ಆರ್. ಲ್ಯಾಬ್ ಸ್ಥಾಪನೆ ಆಗಿರುವುದರಿಂದ ಕೋವಿಡ್ ಪರೀಕ್ಷೆಗಾಗಿ ಬೆಂಗಳೂರು ಮತ್ತು ಕಲಬುರಗಿಗೆ ಮಾದರಿಗಳನ್ನು ಕಳುಹಿಸುವುದು ತಪ್ಪಲಿದೆ. ಇದರ ಜೊತೆಗೆ ಪಾಸಿಟಿವ್ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಲು ಮತ್ತು ವೈರಸ್ ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾದ ವ್ಯಕ್ತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹೂಗುಚ್ಛ ನೀಡಿ ಬೀಳ್ಕೊಟ್ಟರು.

Advertisement

ಬಳಿಕ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಮುಂಭಾಗದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಹಾಗೂ ಸ್ವಾಬ್ ಸಂಗ್ರಹಣ ವಾಹನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ಪಾಟೀಲ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next