Advertisement

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

04:03 AM Dec 15, 2024 | Team Udayavani |

ಕಲಬುರಗಿ: ಬಿಜೆಪಿ ಸರ್ಕಾರದ ಅವ ಧಿಯಲ್ಲಿ ನಡೆದ ಕೋವಿಡ್‌ ಹಗರಣದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತಲುಪಿಸುವವರೆಗೆ ಸರ್ಕಾರ ವಿರಮಿಸುವ ಮಾತೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಜನರಿಗೆ ಮಾತು ಕೊಟ್ಟಂತೆ ಕೋವಿಡ್‌ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಕೋವಿಡ್‌ ಅವಧಿಯ ಬಹಳಷ್ಟು ಹಗರಣದ ಕುರಿತು ತನಿಖೆ ನಡೆಸಲಾಗುತ್ತಿದೆ. ಈಗ ಒಂದೊಂದಾಗಿ ಎಫ್‌ಐಆರ್‌ ದಾಖಲಿಸಲಾಗುತ್ತಿದೆ ಎಂದರು.

ಕೋವಿಡ್‌ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ಧರಿಸುತ್ತಾರೆ. ಯಾರು ಎಷ್ಟೇ ಪ್ರಭಾವಿಯಾಗಿದ್ದರೂ ಸರಿ; ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ನುಡಿದರು.

ವರದಿ ಬಂದ ಬಳಿಕ ಕ್ರಮ:
ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಬಾಣಂತಿಯರ ಸರಣಿ ಸಾವು ಕುರಿತಂತೆ ವೆಸ್ಟ್‌ ಬೆಂಗಾಲ್‌ ಫಾರ್ಮಾಸ್ಯೂಟಿಕಲ್‌ ಕಂಪನಿಯ ರಿಂಗರ್‌ ಲ್ಯಾಕ್ಟೇಟ್‌ ಇಂಟ್ರಾವೇನಸ್‌ ಫ್ಲೂಯೆಡ್‌ ಸಾಚಾತನದ ಕುರಿತು ವರದಿ ನಿರೀಕ್ಷಿಸಲಾಗುತ್ತಿದೆ. ವರದಿ ಬಂದ ನಂತರಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next