Advertisement

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

11:10 PM Nov 16, 2024 | Team Udayavani |

ಮಂಗಳೂರು: ಕೋವಿಡ್‌ ಅವಧಿಯ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ನ್ಯಾ.ಕುನ್ಹಾ ಅವರು ನೀಡಿರುವ ಪ್ರಥಮ ವರದಿಯಲ್ಲಿ ಅವ್ಯವಹಾರಗಳ ಬಗ್ಗೆ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಇದರಲ್ಲಿ ದಾರಿ ತಪ್ಪಿಸುವ ತಂತ್ರಇಲ್ಲ. ನಿಯಮ ಬದ್ಧವಾಗಿ ಕಾನೂನು ಪ್ರಕಾರ ತನಿಖೆ ಮುಂದುವರಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಶನಿವಾರ ಮಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿ, ನಾವು ಪ್ರತಿಪಕ್ಷದಲ್ಲಿದ್ದಾಗಲೇ ಈ ಬಗ್ಗೆ ಪ್ರಸ್ತಾಪ ಮಾಡಿದ್ದೆವು. ಪಬ್ಲಿಕ್ಸ್‌ ಅಕೌಂಟ್ಸ್‌ ಕಮಿಟಿ ಕೂಡ ಇದನ್ನೇ ಹೇಳಿದೆ. ಕೋವಿಡ್‌ ಕುರಿತಂತೆ ವರದಿಯಲ್ಲಿರುವುದು ನಾವು ಹುಟ್ಟು ಹಾಕಿರುವುದಲ್ಲ. ನಮ್ಮ ಇಲಾಖೆಯಲ್ಲಿರುವ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಿ ವರದಿ ನೀಡಿದ್ದಾರೆ. ಇದು ಐಟಿ, ಇ.ಡಿ ತರಹ ರಾಜಕೀಯ ಪ್ರೇರಿತ ವರದಿ ಅಲ್ಲ. ಈಗ ಎಸ್‌ಐಟಿ ರಚನೆ ಮಾಡಬೇಕಾಗಿದೆ. ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಡಿ.ಕುನ್ನಾ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ನೀಡಿದ ಹೇಳಿಕೆಗೆ ಅವರ ವಿರುದ್ಧ ಪ್ರಕರಣ ದಾಖಲಾದರೆ ಅವರು ಜೈಲು ಸೇರುವ ಸಂದರ್ಭ ಬರಬಹುದು. ಈ ವಿಚಾರದಲ್ಲಿ ನ್ಯಾ. ಕುನ್ಹಾ ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನಾವು ಈ ಕುರಿತು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದರು. ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಚಿವ ಸಂಪುಟ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕು ಎಂದು ಆರಗ ಹೇಳಿದ್ದಾರೆ. ಅಂದರೆ ನಮ್ಮನ್ನು ಆರಿಸಿದವರು ಜನರು, ತನ್ನ ಮೇಲಿರುವ ಆರೋಪಗಳಿಗೆ ಅವರಿಗೆ ಉತ್ತರ ನೀಡುವುದಕ್ಕೆ ಆಗುತ್ತಿಲ್ಲ. ಯಾವಾಗ ಉತ್ತರ ಕೊಡುವುದಕ್ಕೆ ಆಗುವುದಿಲ್ಲ, ಆಗ ಈ ರೀತಿಯ ವ್ಯಾಕರಣ ಹೊರ ಬರುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next