ಕೆಲವರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಈ ಮಧ್ಯೆ, ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರು ಲಸಿಕೆ ಪಡೆದುಕೊಳ್ಳುವಂತೆ ಕೆಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.
Advertisement
ಕೊವ್ಯಾಕ್ಸಿನ್ ಲಸಿಕೆ ಪಡೆದವರು 4 ವಾರಗಳ ಬಳಿಕ ಹಾಗೂ ಕೊವಿಶೀಲ್ಡ್ ಲಸಿಕೆ ಪಡೆದವರು 12 ವಾರಗಳ ಬಳಿಕ ಎರಡನೇ ಡೋಸ್ ಹಾಕಿಸಿಕೊಳ್ಳಬೇಕು. ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಸೋಂಕು ತಗಲಿದ್ದರೆ ಗುಣಮುಖರಾದ ಮೂರು ತಿಂಗಳ ಬಳಿಕ ಎರಡನೇ ಡೋಸ್ ಪಡೆದುಕೊಳ್ಳಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಮತ್ತು ಕೊರೊನಾ ಲಸಿಕೆ ವಿಭಾಗದ ರಾಜ್ಯ ಮುಖ್ಯಸ್ಥೆ ಡಾ| ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.
Related Articles
ಕೊರೊನಾ ಲಸಿಕೆಯನ್ನು ಮಕ್ಕಳ ಮೇಲೆ ಅಧ್ಯಯನ ನಡೆಯುತ್ತಿರುವ ಕಾರಣ ಪ್ರಸ್ತುತ ಅವರಿಗೆ ಲಸಿಕೆ ನೀಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಲ್ಲಿ ದುರ್ಬಲ ವರ್ಗದವರು, ಮುಂಚೂಣಿ ಕಾರ್ಯಕರ್ತರು, ಅಂಗವಿಕಲರು ಸಹಿತ ವಿವಿಧ ವರ್ಗದವರನ್ನು ಗುರುತಿಸಿ, ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಶ್ರೀಘ್ರದಲ್ಲೇ ಎಲ್ಲರಿಗೂ ಲಸಿಕೆ ಒದಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
Advertisement