Advertisement

ಕೋವಿಡ್ ಎರಡನೆ ಅಲೆ: ಡಿಸಿಗಳ ಜೊತೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ವಿಡಿಯೊ ಸಂವಾದ

10:32 PM Dec 22, 2020 | mahesh |

ಬೆಂಗಳೂರು: ಕೋವಿಡ್ ವೈರಸ್ ನ ಎರಡನೆ ಅಲೆ, ರೂಪಾಂತರ ಮತ್ತು ವ್ಯಾಕ್ಸಿನ್ ಕುರಿತು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಬುಧವಾರ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ವೈಧ್ಯಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

Advertisement

ವಿಧಾನಸೌಧದ ಮೂರನೆ ಮಹಡಿಯ ಸಮಿತಿ ಕೊಠಡಿಯಲ್ಲಿ ಮಧ್ಯಾನ್ಹ 2.30 ಕ್ಕೆ ವಿಡಿಯೋ ಕಾನ್ಪರೆನ್ಸ್ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು, ಹಾಗೂ ವಿಶ್ವದಲ್ಲಿ ಕೊರೊನಾ ರೂಪಾಂತರ ಮತ್ತು ಎರಡನೆ ಅಲೆಯ ಬಗ್ಗೆ ಚರ್ಚೆಯಾಗುತ್ತಿರುವುದರಿಂದ ಈ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಶುಕ್ರವಾರ ಪ್ರಧಾನಿ ಸಿಎಂಗಳ ಜೊತೆ ಸಂವಾದ:  ಪ್ರಧಾನಿ ನರೇಂದ್ರ ಮೋದಿ ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಶುಕ್ರವಾರ ವಿಡಿಯೊ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next