Advertisement
ಪೊಲೀಸ್ ಇಲಾಖೆಗೆ ಕೊರೊನಾಘಾತ ಸಂಭವಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲೆಯ ವಿವಿಧ ಉಪವಿಭಾಗಗಳ ಹಾಗೂ
Related Articles
Advertisement
ಈ ಸಂದರ್ಭದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೊರೊನಾ ಸೋಂಕುತಗುಲಿರಬಹುದು ಎಂದು ಶಂಕಿಸಲಾಗಿದೆ.ಕೊರೊನಾ ಮೊದಲೆರಡು ಅಲೆಗಳ ಸಂದರ್ಭದಲ್ಲಿಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಫ್ರಂಟ್‌ಲೆçನ್ ವಾರಿಯರ್‌ಗಳಾಗಿ ಹಗಲಿರುಳು ಶ್ರಮಿಸಿದ್ದರು.
ಆಗಲೂ ಸಾಕಷ್ಟು ಮಂದಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆಗ ಕೆಲವು ಪೊಲೀಸ್ ಠಾಣೆಗಳನ್ನೇ ಸೀಲ್‌ಡೌನ್ ಮಾಡಲಾಗಿತ್ತು.
ಇದೀಗ 3ನೇ ಅಲೆಯಲ್ಲಿ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮೂಹಿಕವಾಗಿ ಸೋಂಕಿಗೆಒಳಗಾಗಿರುವುದು ಆತಂಕ ಮೂಡಿಸಿದೆ. ಹೀಗಾಗಿ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರ ಗಂಟಲು ದ್ರವವನ್ನು ಸಂಗ್ರಹಿಸಿಪರೀಕ್ಷೆಗಾಗಿ ಕಳುಹಿಸಲಾಗಿದೆ. ಜತೆಗೆ,ಅವರೆಲ್ಲರನ್ನೂ ಮುಂಜಾಗ್ರತಾ ಕ್ರಮವಾಗಿ ಹೋಮ್ ಐಸೋಲೇಷನ್‌ಗೆ ಒಳಪಡಿಸಲಾಗಿದೆ.
ಮೈಸೂರು ಎಎಸ್‌ಪಿಗೆ ಮಂಡ್ಯ ಹೊಣೆ : ಮಂಡ್ಯ ಎಸ್ಪಿ, ಎಎಸ್‌ಪಿ, ಡಿವೈಎಸ್‌ಪಿಗಳು ಸಾಮೂಹಿಕವಾಗಿ ಸೋಂಕಿಗೆ ಒಳಗಾಗಿರುವುದರಿಂದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯ ಉಸ್ತುವಾರಿ ಜವಾಬ್ದಾರಿಯನ್ನು ಮೈಸೂರುಎಎಸ್‌ಪಿ ಶಿವಕುಮಾರ್ ಅವರಿಗೆ ನೀಡಲಾಗಿದೆ. ಅವರು ಮಂಡ್ಯ ಜಿಲ್ಲೆಗೆ ಆಗಮಿಸಿ, ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಜಿಲ್ಲೆಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ 16 ಮಂದಿ ಪೊಲೀಸ್ ಸಿಬ್ಬಂದಿ ಗಳು ಕೊರೊನಾ ಸೋಂಕಿಗೆಒಳಗಾಗಿದ್ದೇವೆ. ಯಾರಿಗೂಯಾವುದೇ ಆರೋಗ್ಯ ಸಮಸ್ಯೆಯಿಲ್ಲ. ರೋಗ ಲಕ್ಷಣಗಳೂ ಇಲ್ಲ. ಆದರೂಸೋಂಕು ದೃಢಪಟ್ಟಿದ್ದು, ಮುನ್ನೆಚ್ಚರಿಕೆ ಯಾಗಿ ಎಲ್ಲರಿಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. –ಎನ್.ಯತೀಶ್, ಎಸ್ಪಿ, ಮಂಡ್ಯ
ಹೊರ ರಾಜ್ಯದಿಂದ ಬರುತ್ತಿರುವ ಯಾತ್ರಿಕರು, ಸಾರ್ವಜನಿಕರನ್ನು ಕೋವಿಡ್ ನಿಯಮಗಳನ್ವಯಕ್ವಾ ರಂಟೈನ್‌ಗೆ ಒಳಪಡಿಸಲು ಆರೋಗ್ಯ ಇಲಾಖೆಯೊಂದಿಗೆ ಪೊಲೀಸರೂಕೈ ಜೋಡಿಸಿದ್ದಾರೆ. ಆಸಂದರ್ಭದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯೂ ಸೋಂಕಿಗೆ ಒಳಗಾಗಿರುವ ಸಾಧ್ಯತೆಯಿದೆ. ಎಲ್ಲ ಸೋಂಕಿತರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. –ಡಾ.ಟಿ.ಎನ್.ಧನಂಜಯ, ಡಿಎಚ್‌ಒ, ಮಂಡ್ಯ