ನವದೆಹಲಿ : ಉದ್ಯೋಗಿಗಳಿಗೆ ಅವರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಕೋವಿಡ್ ಸೋಂಕು ಲಸಿಕೆ ನೀಡಲು ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ.
ಏಪ್ರಿಲ್ 11 ಭಾನುವಾರದಿಂದ ಲಸಿಕೆ ನೀಡಬಹುದು. ಇದಕ್ಕೆ ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
ಸುಮಾರು 100 ಮಂದಿ ಕೆಲಸ ಮಾಡುವ ಸ್ಥಳಗಳಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಶಿಬಿರಗಳನ್ನು ನಡೆಸಬಹುದು. ಸೋಂಕು ಹರಡುವಿಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ, ಲಸಿಕೆ ಹಾಕುವ ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದೆ.
ಕೋವಿಡ್ ಲಸಿಕೆಯನ್ನಯ ಸದ್ಯ 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ನೀಡಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಮಕ್ಕಳು ಸೇರಿದಂತೆ ಕಿರಿಯ ವಯಸ್ಸಿನವರಿಗೂ ಲಸಿಕೆ ಹಾಕುವ ಯೋಚನೆಯನ್ನು ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ :
ಕೋವಿಡ್ ಎಫೆಕ್ಟ್ : ಇಂದಿನಿಂದ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿ