Advertisement

ಕೋವಿಡ್ ಸಂಕಷ್ಟ : ಕಲಾವಿದ ಮತ್ತು ಕಲಾತಂಡಗಳಿಗೆ 3 ಸಾವಿರ ರೂ .ನೆರವು ಘೋಷಣೆ

04:59 PM May 19, 2021 | Team Udayavani |

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

Advertisement

ಇಂದು ( ಮೇ.19 ಬುಧವಾರ) ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಪ್ರಕಟಿಸಿದರು.  ಕಲಾವಿದರು ಹಾಗೂ ಕಲಾವಿದ ತಂಡಗಳಿಗೆ ತಲಾ 3 ಸಾವಿರ ರೂಪಾಯಿ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ಒಟ್ಟು 16,095 ಫಲಾನುಭವಿಗಳು ಈ ಯೋಜನೆಯನ್ನು ಪಡೆಯಲಿದ್ದಾರೆ. ಇದಕ್ಕಾಗಿ ಸರ್ಕಾರ 4.82 ಕೋಟಿ ವೆಚ್ಚ ಭರಿಸಲಿದೆ ಎಂದು ತಿಳಿಸಿದರು. ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇನ್ನುಳಿದಂತೆ ಹೂವು ಬೆಳೆಗಾರರು, ಹಣ್ಣು-ತರಕಾರಿ ಬೆಳೆದ ರೈತರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ಸಮಾಜದ ಹಲವು ವರ್ಗಗಳಿಗೆ ವಿಶೇಷ ಪ್ಯಾಕೇಜ್ ಅಡಿ ಸಹಾಯಧನ ಸಿಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next