Advertisement

ಹೆಚ್ಚುತ್ತಿರುವ ಸೋಂಕಿನ ಪ್ರಕರಣ : ಎಲ್ಲ ಹೊರರೋಗಿಗಳಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ : BBMP

08:37 PM Dec 20, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ತಳಿ ಒಮಿಕ್ರಾನ್‌ ಹಾಗೂ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನಗರದಲ್ಲಿ ನಿಯಂತ್ರಣಕ್ಕೆ ಕಠಿಣ ಕ್ರಮಗಳಿಗೆ ಮುಂದಾಗಿರುವ ಬಿಬಿಎಂಪಿ, ತನ್ನ ವ್ಯಾಪ್ತಿಯಲ್ಲಿನ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ (ಒಪಿಡಿ)ಕ್ಕೆ ಬರುವ ಎಲ್ಲ ಸಾರಿ, ಐಎಲ್‌ಐ ರೋಗಿಗಳಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸಿದೆ.

Advertisement

ಕೋವಿಡ್‌ ಸೋಂಕು ನಿಯಂತ್ರಿಸುವ ಸಂಬಂಧ ನೂರಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್‌ ಹೋಮ್ಸ್ ಅಸೋಸಿಯೇಷನ್‌ (PHANA) ಜತೆ ಬಿಬಿಎಂಪಿ ಅಧಿಕಾರಿಗಳು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ವಿಶೇಷ ಆಯುಕ್ತ (ಆರೋಗ್ಯ ಮತ್ತು ಐಟಿ) ಡಾ.ತ್ರಿಲೋಕ್‌ಚಂದ್ರ, ನಗರದಲ್ಲಿ ಕೋವಿಡ್‌ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ಮೊದಲ ಡೋಸ್‌ ಪಡೆದು ಎರಡನೇ ಡೋಸ್‌ ಪಡೆಯದಿದ್ದರೆ ಕೂಡಲೇ ಎಲ್ಲರಿಗೂ ಎರಡನೇ ಡೋಸ್‌ ಲಸಿಕೆ ನೀಡಬೇಕು. ಜತೆಗೆ ಆಸ್ಪತ್ರೆಗೆ ಬರುವ ಎಲ್ಲರಿಗೂ ಎರಡೂ ಡೋಸ್‌ ಲಸಿಕೆ ಪಡೆದಿರುವ ಬಗ್ಗೆ ಖಾತ್ರಿಪಡಿಸಿಕೊಂಡು ಲಸಿಕೆ ಪಡೆದವರಿಗೆ ಲಸಿಕೆ ನೀಡಬೇಕು ಎಂದು ಹೇಳಿದರು.

ಸದ್ಯ ನಗರದಲ್ಲಿ ಕೋವಿಡ್‌ ಹಾವಳಿ ನಿಯಂತ್ರಣಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಹಿಂದಿನ ಅದೇಶದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ಹಾಸಿಗೆ ಮೀಸಲಿಡಲು ಸಿದ್ಧರಾಗಿರಬೇಕು. ಅಲ್ಲದೆ ಮಕ್ಕಳ ಚಿಕಿತ್ಸೆಗಾಗಿಯೂ ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ತಿಳಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆಗಳ ಹೋರರೋಗಿಗಳ ವಿಭಾಗ (ಒಪಿಡಿ)ಕ್ಕೆ ಬರುವ ಎಲ್ಲ ಸಾರಿ, ಐಎಲ…ಐ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಬೇಕು ಹಾಗೂ ಇತರೆ ರೋಗಿಗಳಿಗೂ ಅಗತ್ಯವಿದ್ದಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಬೇಕು ಎಂದು ನಿರ್ದೇಶನ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಸೋಂಕು ಚಿಕಿತ್ಸೆಗಾಗಿ ಮೀಸಲಿಟ್ಟಿರುವ ಹಾಸಿಗೆಗಳ (ರಿಯಲ್‌ ಟೈಮ್‌ ಬೆಡ್‌ ಅವೈಲಬಲಿಟಿ) ಬಗ್ಗೆ PHANA ಪೋರ್ಟಲ್‌ನಲ್ಲಿ ಅನುಮೋದನೆ ಮಾಡಬೇಕು. ಇದಲ್ಲದೆ ಆಕ್ಸಿಜನ್‌ ಸಮಸ್ಯೆಯಾಗದಂತೆ ಮುಂಚಿತವಾಗಿ ಎಲ್ಲ ರೀತಿಯ ಪೂರ್ವತಯಾರಿಗಳನ್ನು ಮಾಡಿಕೊಂಡಿರಬೇಕು ಎಂದು ಸೂಚನೆ ನೀಡಿದ ಅವರು, ಬಿಬಿಎಂಪಿಯಿಂದ ವಿಶೇಷ ಆಸ್ಪತ್ರೆ ತಪಾಸಣಾ ತಂಡಗಳು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯವಿರುವ ಎಲ್ಲ ಕ್ರಮಗಳನ್ನು ಜಾರಿಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುತ್ತಿರುವುದಾಗಿಯೂ ಮಾಹಿತಿ ನೀಡಿದರು.

Advertisement

ಸಭೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್‌, ಎಲ್ಲ ವಲಯ ಆರೋಗ್ಯಾಧಿಕಾರಿಗಳು, ವಾರ್‌ ರೂಂ ವೈದ್ಯರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ಪ್ರಶ್ನಿಸಿ ಅರ್ಜಿ : ಹೈಕೋರ್ಟ್‌ ನೋಟಿಸ್‌

Advertisement

Udayavani is now on Telegram. Click here to join our channel and stay updated with the latest news.

Next