Advertisement

ವಿಟ್ಲ: ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ

10:40 AM Jun 17, 2021 | Team Udayavani |

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ನಾಗರಿಕರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಗುರುವಾರ ಬೆಳಗ್ಗೆ 10 ಗಂಟೆಯವರೆಗೆ ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

Advertisement

ವಿಟ್ಲ ಪಟ್ಟಣ ಪಂಚಾಯತ್ ಕೋವಿಡ್ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೋವಿಡ್ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವವರನ್ನು ವಿಟ್ಲ ಪೇಟೆಯ ಪ್ರವೇಶ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು, ಪಟ್ಟಣ ಪಂಚಾಯತ್ ಸಿಬಂದಿ, ವಿಟ್ಲ ಪೊಲೀಸರು ಜಂಟಿಯಾಗಿ ನಾಕಾಬಂದಿ ಅಳವಡಿಸಿದ್ದರು.

ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ 80 ಮಂದಿಯ  ಸ್ವಾಬ್ ಪರೀಕ್ಷೆ ನಡೆಸಲಾಗಿದೆ. ವರದಿ ಬರಬೇಕಾಗಿದೆ. ಆದರೆ ಉಳಿದ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿಗಳಲ್ಲಿ ದೇಹದ ಟೆಂಪರೇಚರ್ ಪರೀಕ್ಷಿಸಲಾಗಿದೆ‌. ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಲಾಯಿತು. ಪೇಟೆಯ ನಾಲ್ಕು ಕಡೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಪಂಚಾಯತ್ ತಿಳಿಸಿದ್ದು, ಆದರೆ ಒಂದು ಕಡೆ ಮಾತ್ರ ತಪಾಸಣೆ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next