Advertisement
ನ್ಯಾ| ಕುನ್ಹಾ ಆಯೋಗದ ಶಿಫಾರಸು ಬಗ್ಗೆ ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿಯ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಚಾಮರಾಜನಗರ ಆಮ್ಲಜನಕ ದುರಂತ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಸ್ವತಃ ಆ ಆಸ್ಪತ್ರೆಗೆ ಹೋಗಿ ಪರಿಸ್ಥಿತಿ ಅವಲೋಕನ ಮಾಡಿದ್ದೆವು. 36 ಜನ ಮೃತಪಟ್ಟಿದ್ದರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ಮೃತಪಟ್ಟ 36 ಮಂದಿಯ ಮನೆಗಳಿಗೆ ನಾನು ಭೇಟಿ ನೀಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
Related Articles
ಬಿಬಿಎಂಪಿ ವ್ಯಾಪ್ತಿಯಲ್ಲಿ 84 ಲಕ್ಷ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿ 502 ಕೋಟಿ ರೂ. ಬಿಲ್ ಮಾಡಿದ್ದು, ಈ ಪೈಕಿ 400 ಕೋಟಿ ರೂ. ಪಾವತಿ ಮಾಡಲಾಗಿದೆ. 84 ಲಕ್ಷ ರೂ. ಎಂದರೆ ಬೆಂಗಳೂರಿನಲ್ಲಿರುವ ಪ್ರತೀ ಮನೆಗೆ ಇಬ್ಬರಂತೆ ಪರೀಕ್ಷೆ ಮಾಡಿರಬೇಕು. ಕಿದ್ವಾಯಿ ಸಂಸ್ಥೆಯೊಂದರಲ್ಲೇ 24 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿ¨ªಾರೆ. ತಾಂತ್ರಿಕವಾಗಿ ಸಮರ್ಥವಾಗಿಲ್ಲದೆ, ಐಸಿಎಂಆರ್ ಅನುಮತಿ ಇಲ್ಲದೆ ಪರೀಕ್ಷೆ ನಡೆಸಲಾಗಿದೆ. 146 ಕೋಟಿ ರೂ. ಬಿಲ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 24 ಲಕ್ಷ ಜನರಿಗೆ ಒಂದೇ ಕಡೆ ಪರೀಕ್ಷೆ ಎಂದರೆ ಅಲ್ಲಿ ಎಷ್ಟು ಜನದಟ್ಟನೆ, ಸರದಿ ಸಾಲು ಇರಬೇಕು. ಈ ವಿಷಯದಲ್ಲಿ ಕಾನೂನು ಚೌಕಟ್ಟು ಮೀರಿ ಏನೆಲ್ಲ ತೀರ್ಮಾನ ಮಾಡಿದ್ದಾರೆ ಎಂಬ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದಾರೆ. ಈ ವರದಿಯನ್ನು ನಾವು ಪರಿಶೀಲನೆ ಮಾಡುತ್ತೇವೆ ಎಂದರು.
Advertisement
ಈ ವರದಿಗಳನ್ನು ಪರಿಶೀಲಿಸಿ, ನಮಗೆ ಮಾರ್ಗದರ್ಶನ ನೀಡಲು ನಿವೃತ್ತ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಮಟ್ಟದ ಸಮಿತಿ ರಚಿಸಲಾಗುವುದು. ಈ ಪ್ರಕರಣದಲ್ಲಿ ನಾವು ಯಾರಿಗೂ ಅನಗತ್ಯವಾಗಿ ತೊಂದರೆ ಮಾಡಬಾರದು ಎಂದು ಈ ನಿರ್ಧಾರ ಮಾಡಿದ್ದೇವೆ ಎಂದರು.
ಪ್ರಮುಖ ಅಂಶವನ್ನಷ್ಟೇ ಹೇಳಿದ್ದೇನೆ
ಕೋವಿಡ್ ತನಿಖೆ ರಾಜಕೀಯ ಪಿತೂರಿ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಶಿವಕುಮಾರ್, ನಾನು ವರದಿಯ ಪ್ರಮುಖ ಅಂಶಗಳನ್ನು ಮಾಧ್ಯಮಗಳ ಮುಂದೆ ಪ್ರಸ್ತಾವ ಮಾಡಿದ್ದೇನೆ ಅಷ್ಟೇ ಎಂದರು. ಕುನ್ಹಾ ವರದಿ ಆಧಾರದ ಮೇಲೆ ಎಸ್‌ಐಟಿ ರಚನೆಯಾಗಿದೆಯೇ ಎಂಬ ಪ್ರಶ್ನೆಗೆ ಪತ್ರಿಕ್ರಿಯಿಸಿ, ಈ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲವೂ ಅಂತಿಮವಾದ ಬಳಿಕ ಮಾಹಿತಿ ನೀಡುತ್ತೇವೆ ಎಂದರು.
ಒಪ್ಪಂದ ಸೂತ್ರದ ಬಗ್ಗೆ ಚರ್ಚೆ ಬೇಡಮುಖ್ಯಮಂತ್ರಿ ವಿಚಾರವಾಗಿ ಒಪ್ಪಂದ ಆಗಿರು ವುದು ನಿಜ ಎಂಬ ಸಚಿವ ಮುನಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಒಪ್ಪಂದದ ವಿಷಯವಾಗಿ ಯಾರೂಚರ್ಚೆ ಮಾಡಬಾರದು. ನಾವು ಮತ್ತು ಅವರು ರಾಜ ಕೀಯವಾಗಿ ಸಹಕಾರದಿಂದ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳಿಗೆ ಕೆಲವು ಜವಾಬ್ದಾರಿ ವಹಿಸಿದ್ದು, ನನಗೆ ಕೆಲವು ಜವಾಬ್ದಾರಿ ವಹಿಸಿ¨ªಾರೆ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಹೇಳಿದ್ದೇ ಅಂತಿಮ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.