Advertisement
ತಾಲೂಕು ಕೇಂದ್ರ ಸ್ಥಾನದಿಂದ ಸುಮಾರು 6-7 ಕಿ.ಮೀ. ಅಂತರದಲ್ಲಿರುವ ಮೇಟಿಕುಪ್ಪೆ ರಸ್ತೆಯ ಸೊಳ್ಳಾಪುರ ಏಕಲವ್ಯ ವಸತಿ ಶಾಲೆಯಲ್ಲಿ ಕೊರೊನಾ ಸೋಂಕಿತರಿಗಾಗಿ 60 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ ಮಾಡಲಿದೆ. ಮುಂದಿನ ದಿನಗಳಲ್ಲಿ ಅಗತ್ಯ ಎನಿಸಿದರೆ ಅದೇ ವಸತಿ ಶಾಲೆಯ ಮತ್ತೂಂದು ಭಾಗದಲ್ಲಿ ಹೆಚ್ಚುವರಿಯಾಗಿ ಮತ್ತೆ 60 ಹಾಸಿಗಳ ಕೋವಿಡ್ ಕೇರ್ ಸೆಂಟರ್‌ಗೆ ವ್ಯವಸ್ಥೆ ಮಾಡಲು ಚಿಂತನೆ ನಡೆದಿದೆ.
ಡಾ.ಭಾಸ್ಕರ್, ಪುರಸಭಾ ಮುಖ್ಯಾಧಿಕಾರಿ ವಿಜಯ ಕುಮಾರ್ ಮತ್ತು ಸರಗೂರಿನ ಸ್ವಾಮಿ ವಿವೇಕಾನಂದ ಆಸ್ಪತ್ರೆಯ ವೈದ್ಯರ ತಂಡ ಏಕಲವ್ಯ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಕೋವಿಡ್ ಸೋಂಕಿತರನ್ನು ಇಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಆರಂಭದಲ್ಲಿ ಕೋವಿಡ್ ಕೇರ್ ಸೆಂಟರ್‌ಗೆ ಒಂದು ಮಿನಿ ಬಸ್, 2 ತುರ್ತು ವಾಹನ, ಎಚ್ .ಡಿ. ಕೋಟೆ ಸರ್ಕಾರಿ ಆಸ್ಪತ್ರೆ ಮತ್ತು ಸರಗೂರು ವಿವೇಕಾನಂದ ಆಸ್ಪತ್ರೆಯ ವೈದ್ಯರು ನಿರ್ವಹಿಸಲಿದ್ದಾರೆ .