Advertisement

ಮತ್ತೆ ಏಳು ಜನರಿಗೆ ಕೊರೊನಾ ಸೋಂಕು

08:11 PM Mar 15, 2021 | Team Udayavani |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ಏಳು ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,990ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯ ಹಲವೆಡೆ ಕೋವಿಡ್‌ ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ ಎಂಟು ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಭಾನುವಾರ ಒಟ್ಟು 598 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ ಏಳು ಜನರಿಗೆ ಕೋವಿಡ್‌ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 14,990ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 69 ಜನ ಕೋವಿಡ್‌ ನಿಂದ ಮೃತಪಟ್ಟಿದ್ದಾರೆ.

ಸೋಂಕಿತರ ಪೈಕಿ ಈಗಾಗಲೇ 14,887 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 34 ಸಕ್ರಿಯ ಪ್ರಕರಣಗಳು ಇವೆ. ಉಳಿದ 221 ಜನರ ವರದಿ ಬರುವುದು ಬಾಕಿ ಇದೆ. 683 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next