Advertisement

ಶಹಾಪುರ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್

11:46 AM Jul 07, 2020 | Suhan S |

ಶಹಾಪುರ: ಕಳೆದ ನಾಲ್ಕು ತಿಂಗಳಿಂದ ಕೋವಿಡ್ ವಾರಿಯರ್ಸ್‌ ಆಗಿ ನಿರಂತರ ಸೇವೆಯಲ್ಲಿದ್ದ ನಗರದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯೊಬ್ಬರಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರು ಸೇರಿದಂತೆ 68 ಜನ ಸಿಬ್ಬಂದಿಯನ್ನು ಹೋಮ್‌ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

Advertisement

ಸೋಮವಾರ ಇಡೀ ಆಸ್ಪತ್ರೆಯನ್ನು ಸ್ಯಾನಿಟೈಸ್‌ ಮಾಡಲಾಯಿತು. ಎರಡು ದಿನಗಳ ಕಾಲ ಕಾರ್ಯ ಚಟುವಟಿಕೆ ಸ್ಥಗಿತಗೊಳಿ ಸಿಲ್‌ಡೌನ್‌ ಮಾಡಲಾಗಿದೆ. ಆಸ್ಪತ್ರೆ ಸಿಬ್ಬಂದಿ ಗಂಟಲು ದ್ರವ ಮತ್ತು ರಕ್ತ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿಗೆ ಹೋಮ್‌ ಕ್ವಾರಂಟೈನ್‌ ವ್ಯವಸ್ಥೆಯಲ್ಲಿರುವಂತೆ ಸೂಚಿಸಲಾಗಿದೆ. ಅಲ್ಲದೆ ಎಲ್ಲ 68 ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಎಂದು ತಾಲೂಕು ವೈದ್ಯಾಧಿಕಾರಿ ರಮೇಶ ಗುತ್ತೇದಾರ ತಿಳಿಸಿದ್ದಾರೆ.

ಆಸ್ಪತ್ರೆಗೆ ಬರುವ ರೋಗಿಗಳನ್ನು ತಡೆಯಲಾಗುತ್ತಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಆದರೆ ಗರ್ಭೀಣಿಯರು ಮತ್ತು ಒಳರೋಗಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಆಸ್ಪತ್ರೆ ವೈದ್ಯಾಧಿಕಾರಿ ಮಲ್ಲಪ್ಪ ಕಣಜಿಗಿಕರ್‌ ತಿಳಿಸಿದ್ದಾರೆ..

ದಿಗ್ಗಿ ಪ್ರದೇಶದಲ್ಲಿ ವಾಸವಿರುವ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ದಿಗ್ಗಿ ಬೇಸ್‌ ಪ್ರದೇಶವನ್ನು ಕಂಟೇನ್ಮೆಂಟ್‌ ವಲಯ ಎಂದು ಗುರುತಿಸುವ ಸಾಧ್ಯತೆ ಇದೆ. ಆ ಭಾಗದ ಜನರು ಗುಂಪು ಗುಂಪಾಗಿ ಸಂಚರಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ವೈದ್ಯಾಧಿಕಾರಿಗಳು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next