Advertisement

ಮತ್ತೆ ಮೂರು ಮಂದಿಗೆ ಕೋವಿಡ್

02:38 PM Jul 12, 2020 | Suhan S |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ ಮೂರು ಕೋವಿಡ್ ಸೋಂಕು ಪಾಸಿಟಿವ್‌ ಪ್ರಕರಣ ದೃಢಪಟ್ಟಿದೆ. ಚಿಕ್ಕಮಗಳೂರು ನಗರದಲ್ಲಿ ಎರಡು ಹಾಗೂ ಕಡೂರು ತಾಲೂಕಿನಲ್ಲಿ ಒಂದು ಪಾಸಿಟಿವ್‌ ಪ್ರಕರಣ ದೃಢಪಟ್ಟಿದೆ.

Advertisement

ಇತ್ತೀಚೆಗೆ ಬೆಂಗಳೂರಿನಿಂದ ಹಿಂದುರುಗಿದ್ದ ನಗರದ ಮಾರ್ಕೆಟ್‌ ರಸ್ತೆಯ ನಿವಾಸಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ ಹಾಗೂ ಅದೇ ಬಡಾವಣೆಯಲ್ಲಿರುವ ವ್ಯಕ್ತಿಯಲ್ಲಿ ಸೋಂಕಿನ ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೋವಿಡ್ ಸೋಂಕಿರುವುದು ಪ್ರಯೋಗಾಲಯದ ವರದಿಯಿಂದ ದೃಢವಾಗಿದೆ.

ಮತ್ತೂಂದು ಪ್ರಕರಣ ಕಡೂರು ತಾಲೂಕಿನ ಮತ್ತಿಗಟ್ಟೆ ಗ್ರಾಮದ ವ್ಯಕ್ತಿಯಲ್ಲಿ ಕಂಡು ಬಂದಿದೆ. ಈ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಪ್ರಯೋಗಾಲಯದ ವರದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತರನ್ನು ನಗರದ ಕೋವಿಡ್‌ -19 ಚಿಕಿತ್ಸಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ವರದಿಯಾಗಿರುವ ಮೂರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 63 ಸಕ್ರಿಯ ಪ್ರಕರಣಗಳಿದ್ದು, ಇಂದು ಇಬ್ಬರು ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next