Advertisement
ಇದರಿಂದ ನಾಗರಿಕರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಡಳಿತ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸದೆ ನಿರ್ಲಕ್ಷ್ಯಿಸುವ ನಾಗರಿಕರಿಗೆ ನಗರಸಭೆಯ ಮಾರ್ಷಲ್‌ಗಳ ಮೂಲಕ ದಂಡ ವಸೂಲಿ ಮಾಡುವ ಕ್ರಮ ಕೈಗೊಂಡರೂ ಮಾಸ್ಕ್ ಧರಿಸಲು ನಾಗರಿಕರು ನಿರ್ಲಕ್ಷ್ಯವಹಿಸಿರುವುದು ಕಂಡುಬಂದಿದೆ.
Related Articles
Advertisement
ತಜ್ಞ ವೈದ್ಯರ ತಂಡ ಸೇವೆಗೆ ಸಿದ್ಧ: ಜಿಲ್ಲಾ ಆರೋಗ್ಯ ಅಧಿಕಾರಿಗಳ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿನುರಿತ ತಜ್ಞ ವೈದ್ಯರ ತಂಡ ಕೋವಿಡ್ ಸೋಂಕಿತರಿಗೆ ಸೇವೆ ಮಾಡಲು ಸರ್ವಸನ್ನದರಾಗಿದ್ದು, ಕೆಮ್ಮು, ಜ್ವರ, ನೆಗಡಿ ಅಥವಾ ಇನ್ನಿತರೆ ಲಕ್ಷಣಗಳು ಕಂಡು ಬಂದರೆ ಕೂಡಲೇ ಕೋವಿಡ್-19 ಪರೀಕ್ಷೆಗೆ ಒಳಪಡಿಸಿ, ಒಂದು ವೇಳೆ ಪಾಸಿಟಿವ್ ಪ್ರಕರಣ ದೃಢಪಟ್ಟರೆ ಕೂಡಲೇ ಅವರಿಗೆ ಜಿಲ್ಲಾ ಮಟ್ಟದಲ್ಲಿ ತೆರೆದಿರುವ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಯನ್ನು ಕಲ್ಪಿಸಲಾಗಿದೆ. ತುರ್ತು ವಾಹನದ ಸೌಲಭ್ಯಒದಗಿಸಲಾಗಿದೆ.
ವಾರಿಯರ್ ತಂಡ ಸಕ್ರೀಯಗೊಳಿಸಲು ಕ್ರಮ:
ಕಳೆದ ವರ್ಷ ಕೋವಿಡ್ ಸೋಂಕಿನ ಅಲೆಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಸೋಂಕು ಕಡಿಮೆಯಾಗಿದೆ. ಸೋಂಕು ನಿಯಂತ್ರಿಸಲು ಈ ಹಿಂದೆ ಜಾರಿಗೊಳಿಸಿದ್ದ ವ್ಯವಸ್ಥೆಗಳನ್ನು ಮತ್ತೂಮ್ಮೆ ಚಾಲನೆ ನೀಡಲು ಸಿದ್ಧತೆ ಮಾಡಿ ಕೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿತಾಲೂಕು ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳು ಹಾಗೂ ಗ್ರಾಪಂ ಮಟ್ಟದಲ್ಲಿ ಕೊರೊನಾ ವಾರಿಯರ್ತಂಡಗಳನ್ನು ಸಕ್ರೀಯಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಅಥವಾ ಹೊರ ರಾಜ್ಯ ಗಳಿಂದ ಬರುವ ಪ್ರಯಾಣಿಕರ ಮೇಲೆ ಕಣ್ಣಿಡಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಲಸಿಕೆ: ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ನೀಡುವ ಸಲುವಾಗಿ ಕೇಂದ್ರ ಸರ್ಕಾರದ ಪರಿಷ್ಕೃತ ಆದೇಶದನ್ವಯ ಸರ್ಕಾರಿ ಶಾಲೆಗಳಲ್ಲಿ ಕೋವಿಡ್ ಲಸಿಕೆ ಹಾಕುವ ಅಭಿ ಯಾನವನ್ನು ಆರಂಭಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅರಿವು ಮೂಡಿಸಲಾ ಗುತ್ತಿದೆ. ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಚುನಾ ಯಿತ ಪ್ರತಿ ನಿಧಿಗಳು ಮತ್ತು ಸಮಾಜ ಸೇವಕರು ಲಸಿಕೆ ನೀಡುವ ಅಭಿಯಾನವನ್ನು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಆರೋಗ್ಯ ಸಚಿವರ ಸೂಚನೆ ಮತ್ತು ಜಿಲ್ಲಾ ಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಜೊತೆಗೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯಗಳೊಂದಿಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ● ಡಾ.ಇಂದಿರಾ.ಆರ್.ಕಬಾಡೆ, ಜಿಲ್ಲಾ ಆರೋಗ್ಯ ಅಧಿಕಾರಿ, ಚಿಕ್ಕಬಳ್ಳಾಪುರ
-ಎಂ.ಎ.ತಮೀಮ್‌ಪಾಷ