ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯವಾಗಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಎಂಟು ರಾಜ್ಯಗಳಲ್ಲಿ ಕಟ್ಟುನಿಟ್ಟಾದ ಜಾಗರೂಕತೆ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಅಲ್ಲದೇ ಸಂಭಾವ್ಯ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಯಾವುದೇ ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕರ್ನಾಟಕ, ಮಹಾರಾಷ್ಟ್ರ , ಉತ್ತರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಕೇರಳ, ಹರ್ಯಾಣ ಮತ್ತು ದೆಹಲಿ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ.
ಇದೇ ವೇಳೆ ಶುಕ್ರವಾರ ದೇಶದಲ್ಲಿ ಹೊಸದಾಗಿ 11,692 ಕೊರೊನಾ ಪ್ರಕರಣಗಳು ದೃಢವಾಗಿವೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಕೇರಳದಲ್ಲಿ 9 ಮಂದಿ ಸೇರಿದಂತೆ ದೇಶದಲ್ಲಿ ಒಟ್ಟು 28 ಮಂದಿ ಬಲಿಯಾಗಿದ್ದಾರೆ.