ಪಣಜಿ: ಗೋವಾದಲ್ಲಿ ಶೇ 100 ರಷ್ಟು ಅರ್ಹ ನಾಗರೀಕರು ಕೋವಿಡ್ ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದ್ದಾರೆ.
ಗೋವಾದಲ್ಲಿ ಕೋವಿಡ್ ಲಸಿಕೆ ದೇಶದಲ್ಲಿಯೇ ಪ್ರಥಮ ಬಾರಿಗೆ ಅರ್ಹ ನಾಗರೀಕರಿಗೆ ಶೇ 100 ರಷ್ಟು ಮೊದಲ ಡೋಸ್ ಲಸಿಕೆ ಪೂರ್ಣಗೊಂಡಿದೆ. ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯ ವೇಗವಾಗಿ ಸಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ಹೊಸ ಶೈಕ್ಷಣಿಕ ನೀತಿಯನ್ನು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತರಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯ ನಿಯಮಗಳ ಪ್ರಕಾರ ಶಾಲಾ ಶಿಕ್ಷಣಕ್ಕಾಗಿ 2030 ಮತ್ತು ಉನ್ನತ ಶಿಕ್ಷಣಕ್ಕಾಗಿ 2040 ರ ವೇಳೆಗೆ ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.
ಇದನ್ನೂ ಓದಿ:ಅನುಮಾನಾಸ್ಪದ ರೀತಿಯಲ್ಲಿ ಶಿಕ್ಷಕಿ ಹಾಗೂ 14 ವರ್ಷದ ಮಗನ ಹತ್ಯೆ : ಪೊಲೀಸರಿಂದ ಶೋಧ ಕಾರ್ಯ
ರಾಜ್ಯದಲ್ಲಿ ಹೊಸ ಶೈಕ್ಷಣಿಕ ನೀತಿಯನ್ನು 2020 ನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಾವಂತ್ ನುಡಿದರು.