Advertisement

ಉಡುಪಿ: ಕೋವಿಡ್‌ ಲಸಿಕೆಗಾಗಿ ಡೇಟಾ ಬೇಸ್‌ ಸಿದ್ಧಪಡಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

06:54 PM Oct 29, 2020 | sudhir |

ಉಡುಪಿ: ಕೋವಿಡ್‌ 19 ಲಸಿಕೆ ತಯಾರಿಕೆಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರಕಾರದ ನಿರ್ದೇಶನದಂತೆ ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು, ಸಹಾಯಕ ಸಿಬಂದಿಗಳಿಗೆ ನೀಡಬೇಕಿದೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳ ಮಾಹಿತಿಯ ಡೇಟಾಬೇಸ್‌ನ್ನು ಶೀಘ್ರದಲ್ಲಿ ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ಸೂಚಿಸಿದರು.

Advertisement

ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್‌ ಲಸಿಕಾ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್‌19 ಲಸಿಕೆ ನೀಡಲು ಜಿಲ್ಲೆಯಲ್ಲಿ ಕೆಪಿಎಂಇ ಕಾಯ್ದೆಯಡಿ ನೊಂದಣಿಯಾಗಿರುವ 982 ಖಾಸಗಿ ಸಂಸ್ಥೆಗಳು ಹಾಗೂ 92 ಸರಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಶುಶ್ರೂಷಕರು, ಲ್ಯಾಬ್‌ ಟೆಕ್ನೀಷಿಯನ್‌ಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರ ವಿವರಗಳನ್ನು ಸಮಗ್ರವಾಗಿ ದಾಖಲಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಅನಂತರದ ಹಂತದಲ್ಲಿ ವೃದ್ದರು ಮತ್ತು ದುರ್ಬಲ ವ್ಯಕ್ತಿಗಳಿಗೆ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ :ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 1 ಸಾವು, 62 ಮಂದಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಮಕ್ಕಳಿಗೆ ನೀಡುವ ನಿಗದಿತ ಲಸಿಕೆಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸದಂತೆ ಸೂಚಿಸಿದ ಜಿಲ್ಲಾಧಿಕಾರಿ, ನಿರಂತರವಾಗಿ ಕಾಯಕ್ರಮಗಳನ್ನು ಆಯೋಜಿಸಿ ಲಸಿಕೆ ನೀಡಿ ಲಾಕ್‌ಡೌನ್‌ ಸಮಯದಲ್ಲಿ ಕುಂಠಿತಗೊಂಡಿರುವ ಗುರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

Advertisement

ಹೆರಿಗೆ ವೇಳೆ ತಾಯಿ ಮರಣವನ್ನು ತಪ್ಪಿಸಲು ಎಲ್ಲ ರೀತಿಯ ಗರಿಷ್ಠ ಪ್ರಯತ್ನ ಮಾಡಬೇಕು. ಗರ್ಭಿಣಿಯರಿಗೆ ಹೆರಿಗೆ ವೇಳೆ ಸಮಸ್ಯೆ ಕಂಡು ಬರುವ ಸಾಧ್ಯತೆಯಿದ್ದಲ್ಲಿ ಅವರ ಚಿಕಿತ್ಸೆಗೆ ಮುಂಚಿತವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿ.ಜಗದೀಶ್‌ ಸೂಚಿಸಿದರು.

ಇದನ್ನೂ ಓದಿ:ಪಡುಬಿದ್ರಿ : ಸಾಲಬಾಧೆಯಿಂದ ಮನನೊಂದ ರಿಕ್ಷಾ ಚಾಲಕ ವಿಷ ಸೇವಿಸಿ ಆತ್ಮಹತ್ಯೆ

ಜಿಲ್ಲೆಯಲ್ಲಿ ಕೋವಿಡ್‌ -19 ಪ್ರಮಾಣ ಕಡಿಮೆಯಾಗುತ್ತಿದ್ದು, ಸಾವುಗಳು ಸಹ ಕಡಿಮೆಯಾಗಿವೆ, ಸಾರ್ವಜನಿಕರು ಕೋವಿಡ್‌ ಸಂಪೂರ್ಣವಾಗಿ ನಾಶವಾಗುವವರೆಗೆ ಸಾಮಾಜಿಕ ಅಂತರ ಪಾಲನೆ ಮತ್ತು ಮಾಸ್ಕ್ ಧರಿಸುವುದನ್ನು ನಿತ್ಯದ ರೂಢಿಯನ್ನಾಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿ.ಪಂ. ಸಿಇಓ ಡಾ| ನವೀನ್‌ ಭಟ್‌, ಡಿಎಚ್‌ಓ ಡಾ| ಸುಧೀರ್‌ ಚಂದ್ರ ಸೂಡ, ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌, ಆರೋಗ್ಯ
ಇಲಾಖೆಯ ಅಧಿಕಾರಿಗಳು, ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಎಂ.ಜಿ.ರಾಮ ಸ್ವಾಗತಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next