Advertisement

ಜಿಲ್ಲಾದ್ಯಂತ ಕೋವಿಡ್‌ ಲಸಿಕೆ

11:57 AM Mar 13, 2021 | Team Udayavani |

ದೇವನಹಳ್ಳಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಕೋವಿಡ್‌ ಲಸಿಕಾ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಆರೋಗ್ಯಕಾರ್ಯಕರ್ತರು ಮತ್ತು ಇತರೆ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮಂಜುಳಾದೇವಿ ತಿಳಿಸಿದರು.

Advertisement

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ 60 ವರ್ಷ ಮೇಲ್ಪಟ್ಟವರು ಹಾಗೂ 45-59 ವರ್ಷದ ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತದೊತ್ತಡ, ಶ್ವಾಸಕೋಶ,ಮೂತ್ರಪಿಂಡ, ಸಂಬಂಧಿಸಿದ ಖಾಯಿಲೆ ಹಾಗೂ ಇತರೆದೀರ್ಘಾವಧಿ ಖಾಯಿಲೆಗಳಿಂದ ಬಳಲುತ್ತಿರುವ ನಾಗರಿಕರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿರುವ ಹಿನ್ನೆಲೆ ಸಂಬಂಧಪಟ್ಟ ಫಲಾನುಭವಿಗಳು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್‌ ಲಸಿಕೆ ಬಗ್ಗೆ ಮಾಹಿತಿ ಪಡೆದು ಲಸಿಕೆಯನ್ನು ಹಾಕಿಸಿಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ,ಸಮುದಾಯ ಆರೋಗ್ಯ ಕೇಂದ್ರ ವಿಜಯಪುರ, ನೆಲಮಂಗಲ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ ಹಾಗೂ ಇತರೆಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್‌ ಲಸಿಕೆಯನ್ನು ನೀಡಲಾಗುವುದು ಹಾಗೂಖಾಸಗಿ ಆಸ್ಪತ್ರೆ ದೇವನಹಳ್ಳಿಯ ಆಕಾಶ್‌ ಆಸ್ಪತ್ರೆ, ರಾಮಯ್ಯ ಲೀನಾ ಆಸ್ಪತ್ರೆ/ ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆ, ನೆಲಮಂಗಲದ ರಾಮಯ್ಯ ಹರ್ಷ ಆಸ್ಪತ್ರೆಯಲ್ಲಿಕೋವಿಡ್‌ಲಸಿಕೆ ಲಭ್ಯವಿದ್ದು, 250 ರೂ. ಗಳನ್ನು ಪಾವತಿಸಿ ಲಸಿಕೆ ಪಡೆಯಬಹುದಾಗಿದೆ ಎಂದರು. ಮಾಹಿತಿಗೆ ದೂ.080-29569449, ಕಂಟ್ರೋಲ್‌ ರೂಂ. ದೂ. ಸಂ080-29781021 ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next