Advertisement

ಜಿಲ್ಲೆಯಲ್ಲಿ 85 ಸಾವಿರ ಮಂದಿಗೆ ಲಸಿಕೆ

11:59 AM Apr 10, 2021 | Team Udayavani |

ದೇವನಹಳ್ಳಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆಯ ಕೇಂದ್ರ ಹಾಗೂ ಕೋವಿಡ್‌ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.

Advertisement

ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿದಿನ 50 ರಿಂದ 70ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಬರುತ್ತಿವೆ.ಈವರೆಗೆ 708 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆಯ ಕೊರತೆ ಇಲ್ಲ. ಜಿಲ್ಲೆಯಲ್ಲಿ 85 ಸಾವಿರ ಜನರಿಗೆ ಇದುವರೆಗೂ ಕೋವಿಡ್‌ ಲಸಿಕೆ ನೀಡಲಾಗಿದೆ.

ನಿತ್ಯ 1300-1400 ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆ ಪ್ರಾರಂಭವಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರಸರ್ಕಾರದ ಆದೇಶದಂತೆ 45 ವರ್ಷ ಮೇಲ್ಪಟ್ಟ ಜಿಲ್ಲೆಯ ಜನತೆಗೆ ಲಸಿಕೆ ನೀಡಲಾಗುತ್ತಿದ್ದು, ಲಸಿಕೆಕುರಿತು ಅಗತ್ಯ ಮಾಹಿತಿಯೊಂದಿಗೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ ಎಂದರು.

ಬೇಸಿಗೆ ಆರಂಭವಾದ ಹಿನ್ನೆಲೆ, ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ತಹಶೀಲ್ದಾರ್‌ ಅನಿಲ್‌ಕುಮಾರ್‌ಅರೋಲಿಕರ್‌, ಪುರಸಭೆ ಮುಖ್ಯಾಧಿಕಾರಿ ಎ.ಎಚ್‌.ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ್‌, ಆರ್‌ಐ ಚಿದಾನಂದ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next