Advertisement

ಲಸಿಕೆ ಉತ್ಸವಕ್ಕೆ ಸಕಲ ಸಿದ್ಧತೆ

03:46 PM Apr 11, 2021 | Team Udayavani |

ಮಂಡ್ಯ: ಕೋವಿಡ್ ಸೋಂಕಿನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಏ.11ರಿಂದ14ರವರೆಗೆ ನಾಲ್ಕು ದಿನಗಳ ಲಸಿಕೆ ಉತ್ಸವ ಹಮ್ಮಿಕೊಂಡಿದೆ. ಅದರಂತೆ ಮಂಡ್ಯ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಸಿದ್ಧತೆ ಕೈಗೊಂಡಿದೆ.

Advertisement

ಪ್ರತಿದಿನ 18 ಸಾವಿರ ಮಂದಿಗೆ ಲಸಿಕೆ: ಲಸಿಕೆ ಉತ್ಸವ ನಡೆಯುವ ನಾಲ್ಕು ದಿನಗಳ ಕಾಲ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ದಿನ 18 ಸಾವಿರ ಮಂದಿಗೆ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ.

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಉತ್ಸವ: ಸೋಂಕು ನಿಯಂತ್ರಣದ ಲಸಿಕೆ ನೀಡಲು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಉತ್ಸವ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಮಿಮ್ಸ್‌ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳು,ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕಆರೋಗ್ಯ ಕೇಂದ್ರ ಸೇರಿದಂತೆ ಕೆಲವು ಆಯ್ದ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ನೀಡಲಾಗುತ್ತಿದೆ.

ಕೆಲಸದ ಸ್ಥಳಕ್ಕೆ ಹೋಗಿ ಲಸಿಕೆ: 45 ವರ್ಷಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲುನೀಡಲಾಗುವುದು. ಆಸ್ಪತ್ರೆಗಳಿಗೆ ಬಂದು ಲಸಿಕೆ ಪಡೆದುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ.ಅಲ್ಲದೆ, 45 ವರ್ಷ ಮೇಲ್ಪಟ್ಟ ವಯೋಮಾನದವರು ಎಲ್ಲೆಲ್ಲಿ ಕೆಲಸ ನಿರ್ವಹಿಸುತ್ತಾರೋ, ಆ ಸ್ಥಳಗಳಿಗೆ ತೆರಳಿ ಅಲ್ಲಿಯೇ ಲಸಿಕೆನೀಡಲಾಗುತ್ತದೆ. ಸರ್ಕಾರಿ ಕಚೇರಿ, ಖಾಸಗಿಕಂಪನಿಗಳು, ಸಕ್ಕರೆ ಕಾರ್ಖಾನೆಗಳು ಸೇರಿದಂತೆವಿವಿಧೆಡೆ ಕಾರ್ಯನಿರ್ವಹಿಸುವ 45 ವರ್ಷಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು.

ಜಾಗೃತಿ ಕಾರ್ಯಕ್ರಮ: ನಾಲ್ಕು ದಿನಗಳ ಕಾಲ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿಮೂಡಿಸಲಾಗುತ್ತದೆ. ಗ್ರಾಮ ಮಟ್ಟದಲ್ಲಿ ಗ್ರಾಮಪಂಚಾಯಿತಿಯಲ್ಲಿ ಟಾಸ್ಕ್ಪೋರ್ಸ್‌, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಕಿರಿಯ ಸಹಾಯಕರು, ವೈದ್ಯರನ್ನೊಳಗೊಂಡ ತಂಡಗಳು ಜಾಗೃತಿ ಮೂಡಿಸಿ ಲಸಿಕೆ ಕೇಂದ್ರಗಳಿಗೆ ಆಗಮಿಸುವಂತೆ ಮಾಡಲಾಗುತ್ತದೆ.

Advertisement

ಜಿಲ್ಲೆಯಲ್ಲಿ ಲಸಿಕೆ ಉತ್ಸವ ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಮಾಡಿಕೊಳ್ಳಲಾಗಿದೆ. ನಾಲ್ಕು ದಿನಗಳ ಕಾಲ ಪ್ರತಿದಿನ 18 ಸಾವಿರ ಮಂದಿಗೆ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.ಡಾ.ಸಂಜಯ್‌, ಜಿಲ್ಲಾ ಸರ್ವೇಕ್ಷಣಾಕಾರಿ, ಮಂಡ್ಯ

Advertisement

Udayavani is now on Telegram. Click here to join our channel and stay updated with the latest news.

Next