Advertisement

ಲಸಿಕೆ ಹಾಕಿಸಿಕೊಂಡು ಕೋವಿಡ್ ಮುಕ್ತಿಗೆ ಯತ್ನಿಸಿ

02:59 PM Apr 14, 2021 | Team Udayavani |

ಧಾರವಾಡ: 45 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡು ಕೋವಿಡ್ ಮುಕ್ತ ಸಮಾಜಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಎಸ್‌.ಎಂ. ಹೊನಕೇರಿ ಹೇಳಿದರು.

Advertisement

ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮದಾರಮಡ್ಡಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೋವಿಡ್‌-19 ಲಸಿಕಾ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್‌ ಲಸಿಕೆ ಸಂಜೀವಿನಿ ಇದ್ದಂತೆ. ಅದನ್ನು ತೆಗೆದುಕೊಳ್ಳಿ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಮಾಸ್ಕ್ ಧರಿಸಿ. ಸ್ಯಾನಿಟೈಸರ್‌ ಉಪಯೋಗಿಸಿ ಎಂದರು.

ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಂಕರ ಶಳಕೆ ಮಾತನಾಡಿ, ಕೋವಿಡ್‌-19ಲಸಿಕೆಯಿಂದ ಯಾವುದೇ ತೊಂದರೆ ಇಲ್ಲ. ಭಯ ಪಡದೆ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ ಹಾಗೂ ಪಡೆಯುವವರಿಗೆ ಆತ್ಮವಿಶ್ವಾಸ ತುಂಬಿ ಎಂದು ಹೇಳಿದರು.

ಮದಾರಮಡ್ಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರುಣಾ ಅಧ್ಯಕ್ಷತೆ ವಹಿಸಿದ್ದರು. ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ಈಶ್ವರ ಸಾಣಿಕೊಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣಾ ಧಿಕಾರಿಡಾ|ಅಯ್ಯನಗೌಡ ಪಾಟೀಲ, ಜಿಲ್ಲಾ ಸಮೀಕ್ಷಣಾ ಧಿಕಾರಿ ಡಾ| ಸುಜಾತಾ ಹಸವಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್‌. ಪಾತ್ರೋಟ ಇದ್ದರು. ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎನ್‌. ಅಗಡಿಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ರೇಖಾ ಬಾಡಗಿ ನಿರೂಪಿಸಿ, ವಂದಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next