Advertisement
ಈ ಕುರಿತು ಮಾಧ್ಯಮ ಹೇಳಿಕರ ಬಿಡುಗಡೆ ಮಾಡಿರುವ ಅವರು,ಭಾರತದಂತಹ ಅತಿ ಜನ ಸಾಂದ್ರತೆಯ ವಿಶಾಲವಾದ ದೇಶದಲ್ಲಿ ಕೋವಿಡ್ ನಂತಹ ಸೋಂಕು ಹರಡುವುದು ಅತಿ ಸಹಜ. ಆದರೂ ನಾವು ಮೊದಲ ಅಲೆಯನ್ನು ಕನಿಷ್ಠ ನಷ್ಟದೊಂದಿಗೆ ಮೆಟ್ಟಿ ನಿಂತಿದ್ದೇವೆ. ಆದರೆ ಎರಡನೇ ಅಲೆ ನಮ್ಮ ಸಾಮರ್ಥ್ಯದ ಎಲ್ಲೆಯನ್ನು ಪರೀಕ್ಷಿಸುತ್ತಿದೆ ಎಂದಿದ್ದಾರೆ.
Related Articles
Advertisement
ಲಸಿಕೆ ಅಭಿಯಾನ ಯಾವುದೇ ಅಡೆತಡೆಗಳಿಲ್ಲದೆ ನಿರಂತರವಾಗಿ ನಡೆಯುತ್ತಿದ್ದು, ಇದಕ್ಕಾಗಿ ಎಲ್ಲ ಆಸ್ಪತ್ರೆಗಳು, ಆರೋಗ್ಯ ಕಾರ್ಯಕರ್ತರು ಹಾಗೂ ಲಸಿಕೆ ಪಡೆದುಕೊಂಡವರು ಎಲ್ಲರೂ ಅಭಿನಂದನಾರ್ಹರು ಪ್ರಶಂಸೆ ವ್ಯಕ್ತಪಡಿಸಿದರು.
ನಾಲ್ಕನೇ ಹಂತದಲ್ಲಿ ಇದೀಗ ದೇಶದ ಜನಸಂಖ್ಯೆಯ ಅತಿದೊಡ್ಡ ಸಮೂಹದ ಲಸಿಕೆ ಕಾರ್ಯಕ್ರಮದ ಸಮಯ ಸನ್ನಿಹಿತವಾಗಿದೆ. ಕೇಂದ್ರ ಸರ್ಕಾರವು ಹಲವು ರಾಜ್ಯಗಳ ಮನವಿಯಂತೆ ಲಸಿಕೆ ಖರೀದಿ ಹಾಗೂ ಅನುಷ್ಠಾನವನ್ನು ರಾಜ್ಯಗಳ ವಿವೇಚನೆಗೆ ಮುಕ್ತಗೊಳಿಸಿದೆ. ರಾಜ್ಯ ಸರ್ಕಾರವು 1 ಕೋಟಿ ಡೋಸ್ ಗಳಷ್ಟು ಲಸಿಕೆ ಖರೀದಿಗೆ ಮುಂದಾಗಿದೆ. ಹೆಚ್ಚುವರಿಯಾಗಿ ಮತ್ತೂ ಒಂದು ಕೋಟಿ ಲಸಿಕೆ ಖರೀದಿಗೆ ಕಾರ್ಯಾದೇಶ ನೀಡಲಾಗುತ್ತಿದೆ. ನಾಲ್ಕನೇ ಹಂತದ ಲಸಿಕಾ ಅಭಿಯಾನವನ್ನು ಹಂತ ಹಂತವಾಗಿ ನಡೆಸಲಾಗುವುದು. ಔಷಧ ಕಂಪೆನಿಗಳು ಹೆಚ್ಚಿರುವ ಈ ಬೇಡಿಕೆಗೆ ತಕ್ಕಂತೆ ತಮ್ಮ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿವೆ ಎಂದಿದ್ದಾರೆ.
ಮೂರನೇ ಲಸಿಕೆಯೂ ಶೀಘ್ರವೇ ಲಭ್ಯವಾಗಲಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಲಭ್ಯತೆಯ ಆಧಾರದಲ್ಲಿ ಲಸಿಕಾ ಅಭಿಯಾನ ಮುಂದುವರೆಯಲಿದೆ. ಈ ಅಭಿಯಾನವು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಹಾಗೂ ಸುಗಮವಾಗಿ ನಡೆಯುವುದನ್ನು ಖಾತರಿ ಪಡಿಸುವ ಗುರಿಯೊಂದಿಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಆ ಮೂಲಕ ಕೋವಿಡ್ ವಿರುದ್ಧದ ಸಮರದಲ್ಲಿ ನಾವು ಮೇಲುಗೈ ಸಾಧಿಸುವ ವಿಶ್ವಾಸ ನನಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.