Advertisement
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೋವಿಡ್ ನಿಯಂತ್ರಣದ ವಿಚಾರದಲ್ಲಿ ವೈಫಲ್ಯ ಅನುಭವಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಪ್ರತಿಪಕ್ಷಗಳ ಮೇಲೆ ಇಲ್ಲಸಲ್ಲದ್ದನ್ನು ಹೇಳಿ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು.
Related Articles
Advertisement
ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರಿದ್ದಾರೆ. ಕಟ್ಟಡ ಕಾರ್ಮಿಕರಿಗೆ ಅವರು ಕಟ್ಟಿರುವ ವಿಮಾ ಕಂತಿನ ಮೊತ್ತದಲ್ಲೇ ಪರಿಹಾರ ಕೊಡಲಾಗುತ್ತದೆ ಹೊರತು ಇದಕ್ಕಾಗಿ ಸರ್ಕಾರ ಪ್ರತ್ಯೇಕ ಅನುದಾನ ಕೊಟ್ಟಿಲ್ಲ.ಶನಿವಾರದಿಂದ ಕಾಂಗ್ರೆಸ್ ಕಾರ್ಯಕರ್ತರು ಪರಿಹಾರಕ್ಕಾಗಿ ಅಸಂಘಟಿತ ಕಾರ್ಮಿಕರ ಹೆಸರು ನೋಂದಾಯಿಸುವ ಕೆಲಸ ಆರಂಭಿಸಲಿದ್ದಾರೆ.
ರಾಜ್ಯದಲ್ಲಿ 12 ಲಕ್ಷಕ್ಕೂ ಅಧಿಕ ಬ್ಯಾಡ್ಜ್ ಹೊಂದಿರುವ ಎಲ್ಲ ಟ್ಯಾಕ್ಸಿ ಆಟೋ ಹಾಗೂ ಕ್ಯಾಬ್ ಚಾಲಕರಿಗೆ ಪರಿಹಾರ ಕೊಡಬೇಕು. ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಬೀದಿ ವ್ಯಾಪಾರಿಗಳಿದ್ದಾರೆ. ಬಿಜೆಪಿ ನಾಯಕರು ಸುಖಾಸುಮ್ಮನೆ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಲಸಿಕೆ ವಿರುದ್ಧ ಕಾಂಗ್ರೆಸ್ ಅಪ್ರಚಾರ ಮಾಡಿದೆ ಎನ್ನುವುದಕ್ಕೆ ದಾಖಲೆ ಒದಗಿಸಿ ಎಂದು ಸವಾಲು ಹಾಕಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಮಾತನಾಡಿ, ದೇಶದ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ ಎಂದರು. ಜಿಪಂ ಮಾಜಿ ಸದಸ್ಯ ಯೋಗೇಶ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಜಿಲ್ಲೆಯಲ್ಲಿರದೆ ಚಿತ್ರದುರ್ಗಕ್ಕೆ ಅತಿಥಿಯಾಗಿದ್ದಾರೆ ಎಂದು ಟೀಕಿಸಿದರು.
ಮಾಜಿ ಶಾಸಕ ಡಿ.ಸುಧಾಕರ್, ಜಿಲ್ಲಾ ಕಾರ್ಯಾಧ್ಯಕ್ಷ ಹಾಲೇಶಪ್ಪ, ಮುಖಂಡರಾದ ಭೀಮಸಮುದ್ರದ ಜಿ.ಎಸ್. ಮಂಜುನಾಥ್, ಎನ್.ಡಿ.ಕುಮಾರ್, ಸಂಪತ್‌ಕುಮಾರ್ ಮತ್ತಿತರರಿದ್ದರು.