Advertisement

ಜಿಲ್ಲೆಯಲ್ಲಿ ಕೊರೊನಾ ತಡೆಗೆ ಲಸಿಕಾ ಪ್ರಕ್ರಿಯೆ

12:44 PM Jan 11, 2022 | Team Udayavani |

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌ ಹಾಗೂ ಒಮಿಕ್ರಾನ್‌ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಮೊದಲನೇ ಹಾಗೂ ಎರಡನೇ ಡೋಸ್‌ ನೀಡುವಲ್ಲಿ ವಿಳಂಬ ಮಾಡದೇ ಲಸಿಕಾ ಪ್ರಕ್ರಿಯೆಯನ್ನು ಶೇ.100ರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿವೈ.ಎಸ್‌.ಪಾಟೀಲ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ,ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್‌ ಸಕ್ರಿಯ ಪ್ರಕರಣಗಳಸಂಖ್ಯೆ 200ರ ಗಡಿ ದಾಟಿದೆ. ಈ ಸಂದರ್ಭದಲ್ಲಿಲಸಿಕೆ ನೀಡುವಲ್ಲಿ ವಿನಾಕಾರಣ ಮುಂದೂಡದೆ ಲಸಿಕೆನೀಡಬೇಕು. ಎರಡನೇ ಡೋಸ್‌ ಲಸಿಕಾ ಪ್ರಕ್ರಿಯೆಶೇ.80ರಷ್ಟಾಗಿದ್ದು, ಲಸಿಕೆ ಪಡೆಯಲು ಹಿಂಜರಿಯುವನಿಗದಿತ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಿ, ಲಸಿಕೆಹಾಕಿಸಿಕೊಳ್ಳಲು ಮನವೊಲಿಸುವ ಮೂಲಕಶೀಘ್ರವಾಗಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ತಿಳಿಸಿದರು.

ಆರೋಗ್ಯ ಸ್ಥಿತಿ ಪರಿಶೀಲಿಸಿ: ಜಿಲ್ಲೆಯಲ್ಲಿರುವ ಹಾಸ್ಟೆಲ್‌ಗ‌ಳಲ್ಲಿ ಕೋವಿಡ್‌ ಪಾಸಿಟೀವ್‌ ಪ್ರಕರಣವರದಿಯಾದಲ್ಲಿ ಸೋಂಕಿತ ವಿದ್ಯಾರ್ಥಿಯನ್ನುಪ್ರತ್ಯೇಕ ಕೊಠಡಿಯಲ್ಲಿರಿಸಬೇಕು. ಪ್ರತಿದಿನ 2ಬಾರಿಯಂತೆ ವೈದ್ಯರು ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ಆರೋಗ್ಯ ಸ್ಥಿತಿಯನ್ನುಪರಿಶೀಲಿಸುವುದರ ಜೊತೆಗೆ ಪ್ರಕರಣ ಕಂಡುಬಂದ ಕೂಡಲೇ ಶಾಲೆಯ ಎಲ್ಲರನ್ನೂ ಪರೀಕ್ಷೆ ಗೊಳಪಡಿಸಬೇಕು. ಪ್ರಕರಣ ವರದಿಯಾದ ದಿನದಿಂದ 7 ದಿನಗಳ ಕಾಲ ರಜೆ ಘೋಷಣೆ ಮಾಡಬೇಕು. ಪಾಸಿಟೀವ್‌ ಪ್ರಕರಣಗಳುಹೆಚ್ಚಾಗಿರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಬೇಕು ಹಾಗೂ ಪರೀಕ್ಷೆ ನಡೆಸಿರುವ ಕುರಿತು 2 ದಿನಗಳೊಳಗೆ ವರದಿನೀಡಬೇಕು. ಜಿಲ್ಲೆಯಲ್ಲಿ ಸ್ಥಾಪಿಸಿರುವ ಎಲ್ಲಾಆಕ್ಸಿಜ‚ನ್‌ ಘಟಕಗಳನ್ನು ಸಕ್ರಿಯ ಹಾಗೂಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಾಲೂಕು ವೈದ್ಯಾಧಿಕಾರಿಗಳಿಗೆ ನಿರ್ದೇಶಿಸಿದರು.

ದೋಷ ಬಗೆಹರಿಸಿಕೊಳ್ಳಿ: ಮಧುಗಿರಿ ತಾಲೂಕಿಗೆ ಬಂಧಿಖಾನೆ ಕಾಮಗಾರಿಗಾಗಿ ಸರ್ಕಾರಿ ಜಮೀನನ್ನು ಕೂಡಲೇ ಮಂಜೂರು ಮಾಡಬೇಕು. ಜಿಲ್ಲೆಯಲ್ಲಿ ಅತಿವೃಷ್ಟಿ ಸಂಬಂಧ ಪರಿಹಾರ ಪೋರ್ಟಲ್‌ಎಂಟ್ರಿಗಳು, ಭೂಮಿ ಪೆಂಡೆನ್ಸಿ, ಪೈಕಿ ಪಹಣಿಒಗ್ಗೂಡಿಸುವಿಕೆ, ಪಹಣಿ ಕಲಂ 3/9 ಮಿಸ್‌ ಮ್ಯಾಚ್‌, ಆಧಾರ್‌ ಸೀಡಿಂಗ್‌ ಸೇರಿದಂತೆ ಇತರೆ ಯಾವುದೇ ಪ್ರಕರಣಗಳಲ್ಲಿನ ತಾಂತ್ರಿಕ ದೋಷಗಳನ್ನು ಬಗೆಹರಿಸಿಕೊಂಡು ವಿನಾಃ ಕಾರಣ ಮುಂದೂಡದೆ ನಿಗದಿತಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸರಿಯಾಗಿ ಕರ್ತವ್ಯನಿರ್ವಹಿಸಿ: ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಅತಿವೃಷ್ಟಿಯಿಂದ ಸಂಭವಿಸಿದ ಮನೆ ಹಾನಿ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ನಿಗದಿಪಡಿಸಿರುವ ಎ, ಬಿ ಹಾಗೂ ಸಿ ಗ್ರೂಪ್‌ಗ್ಳಿಗೆ ಸೇರದ ಪ್ರಕರಣಗಳನ್ನು ಕೈಬಿಡ ಬೇಕು. ನೈಜ ಫ‌ಲಾನುಭವಿಗಳಿಗೆ ಶೀಘ್ರ ಪರಿಹಾರ ಚೆಕ್‌ ವಿತರಣೆ ಮಾಡಬೇಕು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದಲ್ಲಿ ಅಂತಹವರ ವಿರುದ್ಧ ಯಾವುದೇ ರೀತಿಯ ದೂರುಗಳು ಕೇಳಿಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Advertisement

ಸಭೆಯಲ್ಲಿ ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್‌, ಜಿಲ್ಲಾಅರಣ್ಯಾಧಿಕಾರಿ ಡಾ.ಎಸ್‌.ರಮೇಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನಾ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next