Advertisement
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ರಾವ್ ಮಾಹಿತಿ ನೀಡಿದರು. ದಾಖಲೆ ಪತ್ರಗಳಿಲ್ಲದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳದೇ ಇರುವ ಸ್ಥಳೀಯ ಹೊಟೇಲೊಂದರ ಕಾರ್ಮಿಕರ ಬಳಿ ತೆರಳಿ ಮಾಹಿತಿ ಪಡೆದು, ದಾಖಲೆಪತ್ರ ಹೊಂದಿಸಿಕೊಂಡು ಕೋವಿಡ್ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಂಗಡಿ, ಹೊಟೇಲು, ವ್ಯವಹಾರ ಕೇಂದ್ರಗಳ ಮಾಲೀಕರು ತಮ್ಮ ಸಿಬಂದಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಆದೇಶಿಸಿದರು.
Related Articles
Advertisement
ಬಳಿಕ ಉದಯವಾಣಿಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಜಿಲ್ಲೆಯಲ್ಲಿ ಶೇ. 100 ಕೋವಿಡ್ ಲಸಿಕೆ ಗುರಿ ಸಾಧಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮದಡಿ ಪ್ರತೀ ಗ್ರಾಮದಲ್ಲಿ,ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯರು ಸೇರಿಕೊಂಡು ಪ್ರಥಮ ಮತ್ತು ದ್ವಿತೀಯ ಡೋಸ್‌ಲಸಿಕೆ ಪಡೆಯದೆ ಬಾಕಿ ಇದ್ದವರ ಮನೆಗೆ ತೆರಳಿ ಲಸಿಕೆ ಪಡೆಯಲು ಮನವೊಲಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಪು ತಾಲೂಕಿನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರು, ಸಂಘಸಂಸ್ಥೆಗಳು, ವ್ಯವಹಾರ ಕೇಂದ್ರಗಳು ಸಮುದಾಯದಲ್ಲಿ ಲಸಿಕೆ ಹಾಕುವ ಜವಾಬ್ದಾರಿಯನ್ನು ನಿಭಾಯಿಸಿಕೊಂಡಲ್ಲಿ ಉಡುಪಿ ಜಿಲ್ಲೆಯಲ್ಲಿ ಶೇ. 100 ಲಸಿಕೆ ಅಭಿಯಾನ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.